Ad imageAd image

ಬಿ.ವೈ.ವಿಜಯೇಂದ್ರರಿಂದ 150 ಕೋಟಿ ರೂ. ಆಮಿಷ : ಸಿಬಿಐ ತನಿಖೆಗೆ ಆದೇಶಿಸುವಂತೆ ಮೋದಿಗೆ ಸಿದ್ದರಾಮಯ್ಯ ಆಗ್ರಹ

Bharath Vaibhav
ಬಿ.ವೈ.ವಿಜಯೇಂದ್ರರಿಂದ 150 ಕೋಟಿ ರೂ. ಆಮಿಷ : ಸಿಬಿಐ ತನಿಖೆಗೆ ಆದೇಶಿಸುವಂತೆ ಮೋದಿಗೆ ಸಿದ್ದರಾಮಯ್ಯ ಆಗ್ರಹ
WhatsApp Group Join Now
Telegram Group Join Now

ಬೆಂಗಳೂರು:   ವಕ್ಸ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು ಬಿ.ವೈ.ವಿಜಯೇಂದ್ರ ಅವರು ತಮಗೆ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎಂದು ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ನ‌ ಮಾಣಿಪ್ಪಾಡಿ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ನೇರವಾಗಿ ಪತ್ರ ಬರೆದಿರುವುದು ಬಯಲಾಗಿದೆ.
ಪ್ರಧಾನಮಂತ್ರಿಯವರು ಈ ಆರೋಪವನ್ನು ಗಂಭೀರವಾಗಿ ಸ್ವೀಕರಿಸಿ
ತಕ್ಷಣ ಸಿಬಿಐ ತನಿಖೆಗೆ ಆದೇಶಿಸಬೇಕೆಂದು ಸಿದ್ಧರಾಮಯ್ಯ ಅವರು ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಸನ್ಮಾನ ಬಿ.ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ವಿಜಯೇಂದ್ರ ನಮ್ಮ ಮನೆಗೆ ಬಂದು ಎಕ್ಸ್ ಆಸ್ತಿ
ಕಬಳಿಕೆಯ ತನಿಖೆ ನಡೆಸಿ ನೀಡಿರುವ ವರದಿ ಬಗ್ಗೆ ಮೌನವಹಿಸುವಂತೆ ಕೇಳಿಕೊಂಡಿದ್ದು ಮಾತ್ರವಲ್ಲ ಇದಕ್ಕಾಗಿ 150 ಕೋಟಿ ರೂಪಾಯಿಗಳ ಆಮಿಷವೊಡ್ಡಿದ್ದರು. ನಾನು ಅವರಿಗೆ ಗದರಿಸಿ ಮನೆಯಿಂದ ಓಡಿಸಿದೆ. ಅದರ ನಂತರ ಈ ಎಲ್ಲ ಘಟನೆಗಳನ್ನು ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿದೆ” ಎಂದು ಸಾಕ್ಷಾತ್ ಅನ್ವರ್ ಮಾಣಿಪ್ರಾಡಿಯವರೇ ಮಾಧ್ಯಮದ ಮುಂದೆ
ಹೇಳಿಕೊಂಡಿದ್ದರು.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!