ಬೆಂಗಳೂರು:ದೇವದಾಸಿ ಪದ್ಧತಿ ನಿಷೇಧ ಆಗಿದೆ. ಎಲ್ಲಿಯಾದರೂ ನಡೆದದ್ದು ಗಮನಕ್ಕೆ ಬಂದರೆ SP-DC ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಎಚ್ಚರಿಸಿದರು.
ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯುತ್ತಿರುವ ರಾಜ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದು, ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಬೇಲ್ ಸಿಕ್ಕರೆ ಅದು ನಿಮ್ಮ ದೌರ್ಬಲ್ಯ ,ಹೀಗಾದರೆ ಜಾತಿ ದೌರ್ಜನ್ಯ ತಡೆಗಟ್ಟುವುದು ಸಾಧ್ಯವಿಲ್ಲ.
ಗಂಭೀರ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಜಾಮೀನು ಸಿಕ್ಕರೆ, ಮೇಲ್ಮನವಿ ಹೋಗಿ ಜಾಮೀನು ರದ್ದುಪಡಿಸಿ ಆರೋಪಿಗೆ ಶಿಕ್ಷೆ ಕೊಡಿಸಿದ ಪ್ರಕರಣಗಳು ಎಷ್ಟಿವೆ ? ಈ ಬಗ್ಗೆ ವಿವರ ಕೂಡಿ ಎಂದು ಗರಂ ಆಗಿ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಮಯ್ಯ ಅವರು ಪ್ರಶ್ನಿಸಿದರು. ಪೊಲೀಸ್ ಇಲಾಖೆಯಲ್ಲಿ ಸೀನಿಯರಿಟಿ ಲೀಸ್ಟ್ ಉಲ್ಲಂಘನೆ ಆಗಿ ಪರಿಶಿಷ್ಟರಿಗೆ ಅನ್ಯಾಯ ಆಗುತ್ತಿದೆ. ಸಮಿತಿ ಮುಂದೆ ದೂರು ಬಂದು ನಾವು ಹಿರಿಯ ಅಧಿಕಾರಿಗಳ ಗಮನಕ್ಕೂ ತಂದರೂ ಸಮಸ್ಯೆ ಬಗೆಹರಿಸುತ್ತಿಲ್ಲ ಏಕೆ ? ADGP ಅಡಿನ್ ಅವರು ಸರಿಯಾಗಿ ನಡೆದುಕೊಳ್ಳುತ್ತಿಲ್ಲ ಎಂದು ಸಂಸದ ಈ.ತುಕಾರಾಮ್ ಮತ್ತು ಶಾಸಕ ನರೇಂದ್ರಸ್ವಾಮಿ ಅವರು ಸಭೆಯ ಗಮನಕ್ಕೆ ತಂದರು. ಇದರಿಂದ ಅಸಮಾಧಾನಗೊಂಡ ಸಿಎಂ ಈ ವಿಚಾರವನ್ನು ಮುಂದಿನ ಕ್ಯಾಬಿನೆಟ್ ಗೆ ತರಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೂಚಿಸಿದರು.