Ad imageAd image

ಜಿಪಂ, ತಾಪಂ ಚುನಾವಣೆ ನಡೆಸಲು ನಾವು ಸಿದ್ಧರಿದ್ದೇವೆ : ಸಿದ್ದರಾಮಯ್ಯ 

Bharath Vaibhav
ಜಿಪಂ, ತಾಪಂ ಚುನಾವಣೆ ನಡೆಸಲು ನಾವು ಸಿದ್ಧರಿದ್ದೇವೆ : ಸಿದ್ದರಾಮಯ್ಯ 
siddaramaiah
WhatsApp Group Join Now
Telegram Group Join Now

ಬೆಂಗಳೂರು : ಲೋಕಸಭಾ ಚುನಾವಣೆ ಫಲಿತಾಂಶದ ನಂತರ ತಾಲ್ಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆ ಕೂಡ ನಡೆಸಲಾಗುವುದು. ಸರ್ಕಾರ ಚುನಾವಣೆ ನಡೆಸಲು ಸಿದ್ಧವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೈಸೂರಿನಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಲೋಕಸಭಾ ಚುನಾವಣೆ ಫಲಿತಾಂಶದ ನಂತರ ತಾಲ್ಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆ ಕೂಡ ನಡೆಸಲಾಗುವುದು.

ಸರ್ಕಾರ ಚುನಾವಣೆ ನಡೆಸಲು ಸಿದ್ಧವಿದೆ. ಕ್ಷೇತ್ರ ಪುನರ್ವಿಗಂಡನೆಗೆ ಜನವರಿವರೆಗೆ ಗಡುವು ಇದ್ದು, ಈ ಬಗ್ಗೆ ಅಡ್ವೋಕೇಟ್ ಜನರಲ್ ಜೊತೆ ಚರ್ಚೆ ಮಾಡಿ ಅವರು ಕಾನೂನು ಪ್ರಕಾರ ಏನು ಮಾಡಬೇಕೆಂದು ಹೇಳುತ್ತಾರೋ ಹಾಗೆ ಮಾಡುತ್ತೇವೆ. ಪುನರ್ ವಿಂಗಡಣೆಯಾದ ಮೇಲೆ ಮೀಸಲಾತಿ ಮಾಡಲೇಬೇಕಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ನಮ್ಮ ಹೈಕಮಾಂಡ್ನವರು ನನ್ನ ಪುತ್ರ ಡಾ|| ಯತೀಂದ್ರ ಅವರನ್ನು ಎಂ.ಎಲ್.ಸಿ ಮಾಡುವುದಾಗಿ ಹೇಳಿದ್ದರು. ಈಗಿನ ಅವರ ನಿರ್ಧಾರ ಏನೆಂದು ನನಗೆ ಗೊತ್ತಿಲ್ಲ. ಕಳೆದ ಚುನಾವಣೆಯಲ್ಲಿ ನಾನು ವರುಣಾದಿಂದಲೇ ನಿಲ್ಲಬೇಕು ಎಂದು ತೀರ್ಮಾನವಾದಾಗ ಕ್ಷೇತ್ರ ಬಿಟ್ಟುಕೊಡಲು ಸೂಚಿಸಿದ್ದರು ಮಾಡಲೇಬೇಕಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

 

 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!