Ad imageAd image

ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳುತ್ತೇನೆ : ವರಸೆ ಬದಲಿಸಿದ ಸಿದ್ದರಾಮಯ್ಯ 

Bharath Vaibhav
ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳುತ್ತೇನೆ : ವರಸೆ ಬದಲಿಸಿದ ಸಿದ್ದರಾಮಯ್ಯ 
WhatsApp Group Join Now
Telegram Group Join Now

ಚಿಕ್ಕಬಳ್ಳಾಪುರ : ಕಳೆದ ಎರಡು ದಿನಗಳಿಂದ ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಆಗಿರುತ್ತೇನೆ. ಮುಂದಿನ ಎರಡು ಬಜೆಟ್ ನಾನೇ ಮಂಡಿಸುತ್ತೇನೆ ಎಂದು ಹೇಳಿಕೆ ನೀಡುತ್ತಾ ಬಂದಿದ್ದರು. ಯಾವಾಗ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದರೋ, ಇದೀಗ ತಮ್ಮ ಮಾತು ಬದಲಿಸಿದ್ದಾರೆ.

ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳುತ್ತೇನೆ ಎಂದು ಇದೀಗ ತಮ್ಮ ವರಸೆಯನ್ನು ಸಿಎಂ ಸಿದ್ದರಾಮಯ್ಯ ಬದಲಿಸಿದ್ದಾರೆ.

ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆಯೋ ಅದಕ್ಕೆ ಬದ್ದ ಆಗಿರುತ್ತೇನೆ ಎಂದು ಹನುಮಂತಪುರ ಗ್ರಾಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹನುಮಂತಪುರದಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಚರ್ಚೆ ನಡೆಯುತ್ತಿರುವ ವಿಚಾರವಾಗಿ ಹೈಕಮಾಂಡ್ ಎನ್ನು ತೀರ್ಮಾನ ತೆಗೆದುಕೊಳ್ಳುತೋ ಅದಕ್ಕೆ ಬದರಾಗುತ್ತೇವೆ ಎಂದರು.

ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತೋ ಅದಕ್ಕೆ ಬದ್ದ. ಹೈಕಮಾಂಡ್ ಏನೆ ನಿರ್ಧಾರ ತೆಗೆದುಕೊಂಡರು ಅದನ್ನು ನಾವು ಮುಂದುವರಿಸಿಕೊಂಡು ಹೋಗುತ್ತೇವೆ. ಅಕಸ್ಮಾತ್ ಹೈಕಮಾಂಡ್ ನನ್ನನ್ನೇ ಮುಂದುವರೆಸಲು ಹೇಳಿದರೆ ನಾನೇ ಐದು ವರ್ಷ ಸಿಎಂ ಆಗಿ ಮುಂದುವರೆಯುತ್ತೇನೆ ಇಲ್ಲವಾದರೆ ಹೈಕಮಾಂಡ್ ಬೇರೆ ಯಾವುದೇ ನಿರ್ಧಾರ ತೆಗೆದುಕೊಂಡರು ಅದರಂತೆ ನಡೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ Sತಿಳಿಸಿದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!