Ad imageAd image

ರಾಷ್ಟ್ರಪತಿ ಭೇಟಿಯಾದ ಸಿದ್ದರಾಮಯ್ಯ : 24 ವಿಧೇಯಕಗಳಿಗೆ ಅಂಕಿತ ಹಾಕುವಂತೆ ಮನವಿ 

Bharath Vaibhav
ರಾಷ್ಟ್ರಪತಿ ಭೇಟಿಯಾದ ಸಿದ್ದರಾಮಯ್ಯ : 24 ವಿಧೇಯಕಗಳಿಗೆ ಅಂಕಿತ ಹಾಕುವಂತೆ ಮನವಿ 
WhatsApp Group Join Now
Telegram Group Join Now

ನವದೆಹಲಿ : ರಾಜ್ಯಪಾಲರು ರವಾನಿಸಿರುವ ಬಿಲ್ ಬಗ್ಗೆ ಚರ್ಚೆ ಹಾಗೂ ಬಾಕಿ ಉಳಿದ ಬಿಲ್ ಬಗ್ಗೆ ರಾಷ್ಟ್ರಪತಿಯವರಿಗೆ ಮನವರಿಕೆ ಮಾಡಲು ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ ಕೈಗೊಂಡಿದ್ದು, ಅದರಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿದ್ದಾರೆ.

ರಾಯಚೂರಿನಿಂದ ನೇರವಾಗಿ ದೆಹಲಿ ಪ್ರಯಾಣ ಮಾಡಿದ್ದ ಸಿಎಂ ಮೊದಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಜೊತೆ ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ಪಡೆಯಲಿದ್ದಾರೆ, ಅಲ್ಲದೇ ರಾಜ್ಯದ 24 ಪ್ರಮುಖ ಕಾನೂನು ತಿದ್ದುಪಡಿ ವಿಧೇಯಕಗಳಿಗೆ ಅಂಕಿತ ಹಾಕುವಂತೆ ಸ್ವತಃ ಸಿಎಂ ಅವರೇ ದೆಹಲಿಗೆ ಹೋಗಿ ಮನವಿ ಮಾಡಿದ್ದಾರೆ.

ಮಕ್ಕಳ ಉಚಿತ ಶಿಕ್ಷಣ ಹಾಗೂ ಕಡ್ಡಾಯ ಶಿಕ್ಷಣದ ಹಕ್ಕು ತಿದ್ದು ಪಡಿ ವಿಧೇಯಕ, ನೋಂದಣಿ ಕರ್ನಾಟಕ ತಿದ್ದುಪಡಿ ವಿಧೇಯಕ, ಕರ್ನಾಟಕ ನೋಟರಿಗಳ ತಿದ್ದು ಪಡಿ ವಿಧೇಯಕ, ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ತಿದ್ದುಪಡಿ ವಿಧೇಯಕ, ಕರ್ನಾಟಕ ದಾರ್ಮಿಕ ಸಂಸ್ಥೆಗಳು ಹಾಗೂ ಧಾರ್ಮಿಕ ದತ್ತಿ ತಿದ್ದುಪಡಿ ವಿಧೇಯಕ 2025ರ ಬಗ್ಗೆ ಸಿಎಂ ಚರ್ಚೆ ನಡೆಸಲಿದ್ದಾರೆ.

ಇದಾದ ಬಳಿಕ ಪ್ರಧಾನಿ ಮೋದಿ ಅವರನ್ನು ಭೇಟಿಗೆ ಕಾಲಾವಕಾಶ ಕೇಳಿದ್ದು, ಅಲ್ಲಿಂದ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಅವರೊಂದಿಗೆ ಮಾತನಾಡಿ ಬಳಿಕ ಹೈಕಮಾಂಡ್ ಜೊತೆ ರಾಜ್ಯದಲ್ಲಿ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!