Ad imageAd image

ಕಾಳಿದಾಸನ ನಾಲಗೆ ಮೇಲೆ ಬ್ರಹ್ಮ‌ ಅಕ್ಷರ ಬರೆದಿದ ಅನ್ನೋದನ್ನ ನಂಬದಿರಿ : ಸಿದ್ಧರಾಮಯ್ಯ 

Bharath Vaibhav
ಕಾಳಿದಾಸನ ನಾಲಗೆ ಮೇಲೆ ಬ್ರಹ್ಮ‌ ಅಕ್ಷರ ಬರೆದಿದ ಅನ್ನೋದನ್ನ ನಂಬದಿರಿ : ಸಿದ್ಧರಾಮಯ್ಯ 
siddaramaiah
WhatsApp Group Join Now
Telegram Group Join Now

ತುಮಕೂರು : ಕಾಳಿದಾಸನ ನಾಲಗೆ ಮೇಲೆ ಬ್ರಹ್ಮ‌ ಅಕ್ಷರ ಬರೆದದ್ದಕ್ಕೆ ಮಹಾ ಸಾಹಿತಿಯಾದ ಎನ್ನುವ ಮಾತನ್ನೆಲ್ಲಾ ನಂಬಬೇಡಿ. ವಾಲ್ಮೀಕಿ ದರೋಡೆಕೋರ ಆಗಿದ್ದ ಅನ್ನುವುದನ್ನೆಲ್ಲಾ ನಂಬದಿರಿ.

ಶೂದ್ರರು ವಿದ್ಯಾವಂತರಾಗಿ ಏನಾದರೂ ಮಹತ್ವವಾದದ್ದನ್ನು ಬರೆದರೆ ಅವರ ಬಗ್ಗೆ ಇಂಥಾ ಕತೆಗಳನ್ನು ಕಟ್ಟಿ ಬಿಡ್ತಾರೆ ಹುಷಾರು ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ಕುರುಬ ಸಮಾಜದ ಸಾಂಸ್ಕೃತಿಕ‌ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ನಮ್ಮ ಜ್ಞಾನ ತಿಳಿವಳಿಕೆಯಲ್ಲಿ ಸ್ಪಷ್ಟತೆ ಇರಬೇಕು.

ಕರ್ಮ ಸಿದ್ಧಾಂತವನ್ನು ದಿಕ್ಕರಿಸುವ ವೈಜ್ಞಾನಿಕವಾಗಿ, ವೈಚಾರಿಕವಾಗಿ ಇರಬೇಕು. ಆಗ ಮಾತ್ರ ಗುಲಾಮಗಿರಿಯಿಂದ ಹೊರಗೆ ಬರಬಹುದು. ಸತ್ಯ ಹೇಳುವ ಚಾತಿ ಬೆಳೆಸಿಕೊಳ್ಳಬಹುದು ಎಂದರು.

ಹಿಂದೆ ಸಂಸ್ಕೃತ ಕಲಿಯುವವರಿಗೆ, ಶಿಕ್ಷಣ ಕಲಿಯುವ ಇತರರಿಗೆ ಕಾದ ಸೀಸದ ಶಿಕ್ಷೆ ಇತ್ತು. ಆದರೆ ನಮಗೀಗ ಶಿಕ್ಷಣ ಸಿಕ್ಕಿದೆ. ಅನುಭವಗಳನ್ನು ದಾಖಲಿಸಿ. ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ ಎಂದು ಸಿಎಂ ಕರೆ ನೀಡಿದರು.

ಬಸವಣ್ಣ 850 ವರ್ಷಗಳ ಹಿಂದೆಯೇ ಅನುಭವ ಮಂಟಪ ರಚಿಸಿ ಸಮ ಸಮಾಜ ನಿರ್ಮಾಣಕ್ಕೆ ಮುನ್ನುಡಿ ಬರೆದಿದ್ದರು. ಪ್ರಗತಿಪರ ವಿಚಾರಗಳನ್ನು ಇಟ್ಟುಕೊಂಡವರಿಗೆ ನಿರಂತರವಾಗಿ ಸಮಸ್ಯೆ ಬರುತ್ತಲೇ ಇರುತ್ತವೆ.

ಹೀಗಾಗಿ ಪ್ರಗತಿಪರ ವಿಚಾರಗಳ ಜೊತೆ ನೀವು ಸದಾ ಗಟ್ಟಿಯಾಗಿ ನಿಲ್ಲಬೇಕು. ಪ್ರಗತಿಪರ ವಿಚಾರಗಳ ಜೊತೆಗೆ ನಾವು ನಿಲ್ಲದೆ ಸಮ ಸಮಾಜ ಬರಬೇಕು ಎಂದರೆ ಸಾಧ್ಯವಿಲ್ಲ ಎಂದರು.

ಜಾತಿಗೆ ಚಲನ ಇಲ್ಲ. ವರ್ಗಕ್ಕೆ ಚಲನೆ ಇಲ್ಲ. ಜಾತಿ ವ್ಯವಸ್ಥೆ ನಿಂತ ನೀರು. ಚಲನೆ ಇಲ್ಲ. ಆರ್ಥಿಕ ಚಲನೆ ಸಿಕ್ಕಾಗ ಮಾತ್ರ ಜಾತಿಯಲ್ಲೂ ಚಲನೆ ಸಿಗುತ್ತದೆ. ಈ ಚಲನೆ ಸಿಗಬೇಕಾದರೆ ಶಿಕ್ಷಣದ ಅಗತ್ಯ ಇದೆ.

ಜಾತಿ ಮುಕ್ತ ಮಾನವೀಯ ಸಮಾಜ ನಿರ್ಮಾಣ ನಮ್ಮ ಸಂವಿಧಾನದ ಆಶಯ ಮತ್ತು ಬದ್ಧತೆ. ಆದರೆ ಇವತ್ತಿಗೂ ಅಸ್ಪೃಶ್ಯತೆ ಹೋಗಿಲ್ಲದಿರುವುದು, ಶೈಕ್ಷಣಿಕ ಸಮಾನತೆ ಇಲ್ಲದಿರುವುದು ಬೇಸರದ ಸಂಗತಿ ಎಂದು ಸಿಎಂ ತಿಳಿಸಿದರು.

WhatsApp Group Join Now
Telegram Group Join Now
Share This Article
error: Content is protected !!