Ad imageAd image

ನವೆಂಬರ್ ನಲ್ಲಿ ಸಿದ್ದರಾಮಯ್ಯ ಸಿಎಂ ಸ್ಥಾನ ಕಳೆದುಕೊಳ್ಳಲಿದ್ದಾರೆ : ನೀಲಕಂಠೇಶ್ವರ ಸ್ವಾಮೀಜಿ

Bharath Vaibhav
ನವೆಂಬರ್ ನಲ್ಲಿ ಸಿದ್ದರಾಮಯ್ಯ ಸಿಎಂ ಸ್ಥಾನ ಕಳೆದುಕೊಳ್ಳಲಿದ್ದಾರೆ : ನೀಲಕಂಠೇಶ್ವರ ಸ್ವಾಮೀಜಿ
WhatsApp Group Join Now
Telegram Group Join Now

ಬಾಗಲಕೋಟೆ : ಧರ್ಮ ಒಡೆಯುವ ಕೆಲಸಕ್ಕೆ ಕೈ ಹಾಕಿದರೆ ಸಿದ್ದರಾಮಯ್ಯ ಸಿಎಂ ಸ್ಥಾನ ಕಳೆದುಕೊಳ್ಳಲಿದ್ದಾರೆ ಎಂದು ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡದ ಅಮರೇಶ್ವರ ಮಠದ ನೀಲಕಂಠೇಶ್ವರ ಸ್ವಾಮೀಜಿ ಸ್ಪೋಟಕ ಭವಿಷ್ಯ ನುಡಿದಿದ್ದಾರೆ.

ನಿನ್ನೆ ಬೆಂಗಳೂರಲ್ಲಿ ಬಸವ ಸಂಸ್ಕೃತಿ ಅಭಿಯಾನದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾದ ಹಿನ್ನೆಲೆ ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡದ ಅಮರೇಶ್ವರ ಮಠದ ನೀಲಕಂಠೇಶ್ವರ ಸ್ವಾಮೀಜಿ ಮಾತನಾಡಿ, ಧರ್ಮ ಒಡೆಯುವ ಕೆಲಸಕ್ಕೆ ಕೈ ಹಾಕಿದರೆ ಸಿದ್ದರಾಮಯ್ಯ ಸಿಎಂ ಸ್ಥಾನ ಕಳೆದುಕೊಳ್ಳಲಿದ್ದಾರೆ.

ಕೆಲವು ಸಚಿವರು ಆ ಕಡೆ, ಕೆಲವು ಸಚಿವರು ಈ ಕಡೆ ಇದ್ದಾರೆ. ನವಂಬರನಲ್ಲಿ ಇದರಿಂದಲೇ ಸಿಎಂ ಸ್ಥಾನಕ್ಕೆ ಕುತ್ತು ಬರುವ ಸಾಧ್ಯತೆ ಇದೆ ಎಂದು ಭವಿಷ್ಯ ನುಡಿದಿದ್ದಾರೆ.

ಸರ್ಕಾರದ ಸಚಿವರು ಕೆಲವರು ಆ ಕಡೆ, ಕೆಲವರು ಈ ಕಡೆ ಮಾತನಾಡುವುದು ಕೇಳಿ ನವಂಬರನಲ್ಲಿ ಸಿದ್ದರಾಮಯ್ಯನವರಿಗೆ ಕುತ್ತು ಬರುತ್ತದೆಯೇನೋ ಎಂದು ನಮಗೆ ಎನಿಸುತ್ತಿದೆ.

ಮೊನ್ನೆಯೇ ಸಿದ್ದರಾಮಯ್ಯನವರಿಗೆ ಆ ಸಭೆಗೆ ಹೋದರೆ ಸ್ವಲ್ಪ ಹೆಚ್ಚು ಕಡಿಮೆ ಆಗಬಹುದು ಅಂತ ಹೇಳಿದ್ದೆವು. ಸಿದ್ದರಾಮಯ್ಯನವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ.

ವೀರಶೈವ ಲಿಂಗಾಯತರೆಲ್ಲಾ ಒಂದು ಎನ್ನುವುದನ್ನು ಹೇಳುತ್ತಾ ಬಂದಿದ್ದೇವೆ. ಸಿದ್ದರಾಮಯ್ಯನವರು ಇಬ್ಭಾಗ ಮಾಡುವುದು ಬಿಟ್ಟು ಒಂದು ಮಾಡಿದ್ರೆ ಒಳ್ಳೆಯದಾಗುತ್ತದೆ ಎಂದಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!