Ad imageAd image

ಜಾತಿಗಣತಿ ವರದಿಯನ್ನು ಶೀಘ್ರವೇ ಸಚಿವ ಸಂಪುಟ ಸಭೆ ಮುಂದಿಡುತ್ತೇವೆ : ಸಿದ್ದರಾಮಯ್ಯ 

Bharath Vaibhav
ಜಾತಿಗಣತಿ ವರದಿಯನ್ನು ಶೀಘ್ರವೇ ಸಚಿವ ಸಂಪುಟ ಸಭೆ ಮುಂದಿಡುತ್ತೇವೆ : ಸಿದ್ದರಾಮಯ್ಯ 
siddaramaiah
WhatsApp Group Join Now
Telegram Group Join Now

ಬೆಂಗಳೂರು ; ರಾಜ್ಯದಲ್ಲಿ ಜಾತಿಗಣತಿ ವರದಿಯನ್ನು ಶೀಘ್ರವೇ ಸಚಿವ ಸಂಪುಟ ಸಭೆಯಲ್ಲಿ ಮುಂದಿಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್‌ ಸರ್ಕಾರ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಬೆಂಗಳೂರು ಪ್ರೆಸ್‌ ಕ್ಬಬ್‌ ನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಜಾತಿಗಣತಿ ವರದಿ ಸ್ವೀಕರಿಸಬೇಡಿ ಎಂದು ತುಂಬಾ ಒತ್ತಡ ಹೇರಿದರು.

ಆದರೆ ಸಾಮಾಜಿಕ ನ್ಯಾಯ, ಸರ್ವರಿಗೂ ಸಮಪಾಲು ಸಮಬಾಳು ಎನ್ನುವ ಮೌಲ್ಯ ಕಾಪಾಡಲು ವರದಿ ಸ್ವೀಕರಿಸಿದ್ದೇವೆ ಎಂದು ತಿಳಿಸಿದ್ದಾರೆ.

ಜಾತಿಗಣತಿ ವರದಿ ಸ್ವೀಕರಿಸಬೇಡಿ ಎಂದು ಒತ್ತಡ ಹೇರಿದರು. ಆದರೆ, ಸಾಮಾಜಿಕ ನ್ಯಾಯ, ಸರ್ವರಿಗೂ ಸಮಪಾಲು, ಸಮಬಾಳು ಎನ್ನುವ ಮೌಲ್ಯ ಕಾಪಾಡಲು ವರದಿ ಸ್ವೀಕರಿಸಿದೆವು. ಆರ್ಥಿಕವಾಗಿ, ಸಾಮಾಜಿಕವಾಗಿ ದುರ್ಬಲರನ್ನು ಪತ್ತೆ ಹಚ್ಚಲು ಜಾತಿ ಗಣತಿ,ಸಾಮಾಜಿಕ ಆರ್ಥಿಕ ಸಮೀಕ್ಷೆ ಅತ್ಯಗತ್ಯ. ಹೀಗಾಗಿಯೇ ನಾವು ಜಾತಿಗಣತಿ ಮಾಡಿಸಿ ವರದಿ ಸ್ವೀಕರಿಸಿದೆವು.

ಈ ವರದಿ ಯಾವುದೇ ಸಮುದಾಯಕ್ಕೂ ತೊಂದರೆ ಮಾಡುವುದಿಲ್ಲ. ಮೋದಿ ಆರ್ಥಿಕವಾಗಿ ಹಿಂದುಳಿದವರಿಗಾಗಿ EWS ಮೀಸಲಾತಿ ಜಾರಿತಂದರು.

ಇಡೀ ದೇಶದಲ್ಲಿ ಮೀಸಲಾತಿಯ ಅನುಕೂಲ ಪಡೆಯದ ಯಾವುದೇ ಜಾತಿ, ವರ್ಗಗಳಿಲ್ಲ. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಷ್ಟ್ರ ಮಟ್ಟದಲ್ಲಿ ಜಾತಿ ಗಣತಿ ಮಾಡುತ್ತೇವೆ ಎಂದು ಘೋಷಿಸಿದ್ದು ಇದೇ ಕಾರಣಕ್ಕೆ. ಇದರಲ್ಲಿ ಏನು ತಪ್ಪಿದೆ ಎಂದು ಸಿಎಂ ಪ್ರಶ್ನಿಸಿದರು.

 

 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!