Ad imageAd image

ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ : ಸಿದ್ದರಾಮಯ್ಯ 

Bharath Vaibhav
ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ : ಸಿದ್ದರಾಮಯ್ಯ 
WhatsApp Group Join Now
Telegram Group Join Now

ಬೆಂಗಳೂರು: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇಂದು ನಾಮಪತ್ರ ಹಿಂಪಡೆದಿದ್ದು, ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಾದಿಕ್ ಪೈಲ್ವಾನ್ ಅವರು ನನಗೆ ಬಹಳ ವರ್ಷಗಳಿಂದ ಪರಿಚಯದವರಾಗಿದ್ದಾರೆ.

ಮೈಸೂರಿನ ಕುಸ್ತಿ ಅಖಾಡಗಳಲ್ಲಿ ಅವರು ಪಾಲ್ಗೊಂಡಾಗ ಭೇಟಿಯಾಗುತ್ತಿದ್ದೆ ಎಂದರು. ಉಪಚುನಾವಣೆಯಲ್ಲಿ ಅಭ್ಯರ್ಥಿಯಾಗಬೇಕೆಂದು ಬಯಸುವುದು ತಪ್ಪೇನಿಲ್ಲ ಎಂದರು.

ನಿನ್ನೆ 11 ಜನ ನಾಮಪತ್ರ ಹಿಂಪಡೆದಿದ್ದಾರೆ. ಪಕ್ಷದ ಕೋರಿಕೆ ಮೇರೆಗೆ ಸಾದಿಕ್ ಅವರು ನಾಮಪತ್ರ ಹಿಂಪಡೆದಿದ್ದರಿಂದ ಅವರಿಗೆ ಮುಖ್ಯಮಂತ್ರಿಗಳು ಧನ್ಯವಾದ ಹೇಳಿದರು.

ಶಾಸಕ ರಿಜ್ವಾನ್ ಅರ್ಷದ್, ಸಲೀಂ ಅಹ್ಮದ್, ನಜೀರ್ ಅಹ್ಮದ್ ಅವರು ದಾವಣಗೆರೆಗೆ ಭೇಟಿ ನೀಡಿದ್ದರು. ಅವರು ತಲುಪುವುದು ತಡವಾದ್ದರಿಂದ ನಾಮ ಪತ್ರ ಸಲ್ಲಿಸುವುದನ್ನು ತಡೆಯಲು ಸಾಧ್ಯವಾಗಲಿಲ್ಲ ವಿಧಾನಪರಿಷತ್ ನಲ್ಲಿ ಉತ್ತರ ನೀಡಬೇಕಿದ್ದರಿಂದ ನಾನು ಖುದ್ದು ಭೇಟಿ ನೀಡಲಾಗಿಲ್ಲ ಎಂದರು.

ಸಾದಿಕ್ ಪೈಲ್ವಾನ್ ಅವರು ಕಾಂಗ್ರೆಸ್ ನಲ್ಲಿ ಸುಮಾರು 40 ವರ್ಷಗಳಿಂದ ಇದ್ದು, ಪಕ್ಷದ ಕಟ್ಟಾಳು, ದಾವಣಗೆರೆಯಲ್ಲಿ 70 ಸಾವಿರ ಮುಸ್ಲಿಂ ಮತದಾರರಿದ್ದು, ಟಿಕೆಟ್ ಆಕಾಂಕ್ಷಿಗಳಾಗಿದ್ದರು.

ಹೈಕಮಾಂಡ್ ಇದನ್ನು ಪರಿಶೀಲಿಸಿ, ಮೃತರಾದವರ ಕುಟುಂಬದವರಿಗೆ ಟಿಕೆಟ್ ನೀಡುವ ಪದ್ಧತಿಯಂತೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ಪುತ್ರ ಸಮರ್ಥ್ ಅವರಿಗೆ ಟಿಕೆಟ್ ನೀಡಲಾಗಿದೆ ಎಂದರು.

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!