Ad imageAd image
- Advertisement -  - Advertisement -  - Advertisement - 

ಸಿದ್ದರಾಮಯ್ಯರ ಕಾಲ್ಗುಣ ಸರಿ ಇಲ್ಲ ಅಂತಿದ್ರು ಆದರೆ, ಈ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ : ಸಿದ್ದರಾಮಯ್ಯ 

Bharath Vaibhav
ಸಿದ್ದರಾಮಯ್ಯರ ಕಾಲ್ಗುಣ ಸರಿ ಇಲ್ಲ ಅಂತಿದ್ರು ಆದರೆ, ಈ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ : ಸಿದ್ದರಾಮಯ್ಯ 
siddaramaiah
WhatsApp Group Join Now
Telegram Group Join Now

ಬೆಂಗಳೂರು : ಸಿದ್ದರಾಮಯ್ಯರ ಕಾಲ್ಗುಣ ಸರಿ ಇಲ್ಲ. ಅದಕ್ಕೆ ರಾಜ್ಯದಲ್ಲಿ ಮಳೆ ಇಲ್ಲ ಎಂದು ನನ್ನ ಬಗ್ಗೆ ಆರೋಪಿಸಿದ್ದರು. ಆದರೆ, ಈ ಬಾರಿ ಉತ್ತಮ ಮಳೆ ಅಂದರೆ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಹೀಗಾಗಿ ನನ್ನ ಬಗ್ಗೆ ಮೂಡಿಸಿದ್ದ ಮತ್ತೊಂದು ಮೂಢನಂಬಿಕೆ ಕೂಡ ಸುಳ್ಳಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ ಮತ್ತು ಚಾಮರಾಜನಗರ ಜಿಲ್ಲಾಡಳಿತ ಆಯೋಜಿಸಿದ್ದ ‘ಚೆಲುವ ಚಾಮರಾಜನಗರ’ ಭರಚುಕ್ಕಿ ಜಲಪಾತೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಪರಿಸರ ಪ್ರವಾಸೋಧ್ಯಮ ಆಹ್ಲಾದಿಸಲು ಚಾಮರಾಜನಗರ ಉತ್ತಮ ಜಿಲ್ಲೆಯಾಗಿದೆ. ಆದರೆ ಆರ್ಥಿಕವಾಗಿ, ಸಾಮಾಜಿಕವಾಗಿ ಬಹಳ ಹಿಂದೆ ಉಳಿದಿದೆ. ಈ ಜಿಲ್ಲೆಗೆ ಕಾಲಿಟ್ಟರೆ ಅಧಿಕಾರ ಹೋಗ್ತದೆ ಎನ್ನುವ ಮೂಢನಂಬಿಕೆ ಬಿತ್ತಿದ್ದರು.

ಆದರೂ ನಾನು ಹತ್ತಕ್ಕೂ ಹೆಚ್ವು ಬಾರಿ ಜಿಲ್ಲೆಗೆ ಮುಖ್ಯಮಂತ್ರಿಯಾಗಿ ಬಂದಿದ್ದೇನೆ. ಇಲ್ಲಿಗೆ ಬಂದಾಗೆಲ್ಲಾ ನನ್ನ ಕುರ್ಚಿ ಹೆಚ್ಚು ಗಟ್ಟಿಯಾಗಿದೆ. ನನ್ನ ಕುರ್ಚಿಯನ್ನು ಬಿಜೆಪಿ-ಜೆಡಿಎಸ್ ನವರು ಅಲ್ಲಾಡಿಸ್ತಾನೇ ಇದಾರೆ.

ಅವರು ಎಷ್ಟೇ ಅಲ್ಲಾಡಿಸಿದ್ರೂ ನಾನು ಇನ್ನಷ್ಟು ಗಟ್ಟಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದು ಬಡವರ, ಶೋಷಿತರ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತಲೇ ಇರ್ತೇನೆ. ಸಿದ್ದರಾಮಯ್ಯರ ಕಾಲ್ಗುಣ ಸರಿ ಇಲ್ಲ. ಅದಕ್ಕೆ ರಾಜ್ಯದಲ್ಲಿ ಮಳೆ ಇಲ್ಲ ಎಂದು ನನ್ನ ಬಗ್ಗೆ ಆರೋಪಿಸಿದ್ದರು.

ಆದರೆ, ಈ ಬಾರಿ ಉತ್ತಮ ಮಳೆ ಅಂದರೆ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಹೀಗಾಗಿ ನನ್ನ ಬಗ್ಗೆ ಮೂಡಿಸಿದ್ದ ಮತ್ತೊಂದು ಮೂಢನಂಬಿಕೆ ಕೂಡ ಸುಳ್ಳಾಗಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಪ್ರವಾಸೋಧ್ಯಮ ಅಭಿವೃದ್ಧಿಪಡಿಸಲು ಸರ್ಕಾರ ಎಲ್ಲಾ ನೆರವನ್ನೂ ನೀಡಲಿದೆ.

ಅಗತ್ಯಬಿದ್ದರೆ ಹೊಸ ಪ್ರವಾಸೋಧ್ಯಮ ನೀತಿಯನ್ನೂ ರಚಿಸಲಾಗುವುದು. ಬಿಳಿಗಿರಿರಂಗನಬೆಟ್ಟ, ಗಗನಚುಕ್ಕಿ ರೋಪ್ ವೇ, ಇಲ್ಲಿನ ದೇವಸ್ಥಾನ ಅಭಿವೃದ್ಧಿ, ಸುವರ್ಣಾವತಿ ಜಲಾಶಯದಲ್ಲಿ ಜಲ ಸಾಹನ ಕ್ರೀಡೆಗಳನ್ನು ಆರಂಭಿಸುವುದೂ ಸೇರಿ ಎಲ್ಲಾ ಯೋಜನೆಗಳಿಗೂ ಸರ್ಕಾರ ಜೊತೆಗೆ ನಿಲ್ಲಲಿದೆ. ಜಿಲ್ಲೆಯಲ್ಲಿ ಪ್ರವಾಸೋದ್ಯಮದ ಮೂಲಕ ಆರ್ಥಿಕತೆಯ ಪ್ರಗತಿ ಕಾಣಿಸಲು ಎಲ್ಲಾ ಸಹಕಾರವನ್ನೂ ಸರ್ಕಾರ ನೀಡಲಿದೆ ಎಂದಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!