ಬೆಂಗಳೂರು : ಕಾಂಗ್ರೆಸ್ ನಲ್ಲಿ ಯಾವುದೇ ನಾಯಕತ್ವ ಬದಲಾವಣೆ ಇಲ್ಲ, ನಾವು ಸಿಎಂ ಸಿದ್ದರಾಮಯ್ಯನವರ ಕೈ ಬಲಪಡಿಸ್ತೀವಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಡಿ.ಕೆ ಶಿವಕುಮಾರ್ ‘ಇಕ್ಬಾಲ್ ಹುಸೇನ್ ಗೆ ನೋಟಿಸ್ ಕೊಡುತ್ತೇವೆ, ಬಾಲಕೃಷ್ಣ ಆಗಿರಲಿ, ಬಿ.ಆರ್ ಪಾಟೀಲ್ ಆಗಿರಲಿ ಯಾರೂ ಮಾಧ್ಯಮಗಳ ಮುಂದೆ ಹೋಗಬಾರದು ಎಂದು ಬೆಂಬಲಿಗ ಶಾಸಕರಿಗೆ ಡಿಕೆಶಿ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ 2.5 ವರ್ಷ ಸಿಎಂ ಆಗಬೇಕು, ಆಗುತ್ತಾರೆ ಎಂಬ ಶಾಸಕ ಇಕ್ಬಾಲ್ ಹುಸೇನ್ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆಶಿ ಇಕ್ಬಾಲ್ ಹುಸೇನ್ ಗೆ ನೋಟಿಸ್ ಕೊಡುತ್ತೇವೆ ಎಂದರು.




