Ad imageAd image

ಗೃಹಲಕ್ಷ್ಮಿ ಹಣದಿಂದ ಮನೆ ಬಾಗಿಲಿನ ಮೇಲೆ ಸಿದ್ದರಾಮಯ್ಯ ಚಿತ್ರ ಕೆತ್ತನೆ

Bharath Vaibhav
ಗೃಹಲಕ್ಷ್ಮಿ ಹಣದಿಂದ ಮನೆ ಬಾಗಿಲಿನ ಮೇಲೆ ಸಿದ್ದರಾಮಯ್ಯ ಚಿತ್ರ ಕೆತ್ತನೆ
WhatsApp Group Join Now
Telegram Group Join Now

ಕೂಡ್ಲಿಗಿ: ತಾಲ್ಲೂಕಿನ ಕೆಂಚಮಲ್ಲನಹಳ್ಳಿ ಗ್ರಾಮದ ಮಲ್ಲೇಶಪ್ಪ ತಿಪ್ಪೇಸ್ವಾಮಿ ಹಾಗೂ ಪಾರ್ವತಿ ದಂಪತಿ ಮನೆಯ ಬಾಗಿಲಿನ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಚಿತ್ರವನ್ನು ಕೆತ್ತನೆ ಮಾಡಿದ್ದಾರೆ.

ಗೃಹಲಕ್ಷ್ಮಿ ಯೋಜನೆಯಲ್ಲಿ ಪಾರ್ವತಮ್ಮ ಅವರಿಗೆ ₹ 30 ಸಾವಿರ ಸಂದಾಯವಾಗಿತ್ತು.ಅದನ್ನು ಯಾವುದಕ್ಕೂ ಬಳಸಿರಲಿಲ್ಲ. ಈಗ ಅದನ್ನು ಬಳಸಿ ಬಾಗಿಲಿಗೆ ಸಿದ್ದರಾಮಯ್ಯ ಚಿತ್ರ ಕೆತ್ತಿಸಲಾಗಿದೆ.

ಇದಕ್ಕೆ ₹ 28 ಸಾವಿರ ಖರ್ಚಾಯಿತು. ಇದೆಲ್ಲವೂ ಸಿದ್ದರಾಮಯ್ಯ ಅವರ ಮೇಲಿನ ಅಭಿಮಾನದಿಂದ ಮಾಡಿದ್ದು’ ಎಂದು ಮಲ್ಲೇಶಪ್ಪ ತಿಪ್ಪೇಸ್ವಾಮಿ ತಿಳಿಸಿದರು.

‘ಹಳೇ ಬಾಗಿಲನ್ನು ತೆಗೆದು ಹಾಕಿ, ಸಿದ್ದರಾಮಯ್ಯ ಅವರ ಭಾವಚಿತ್ರವಿರುವ ಹೊಸ ಬಾಗಿಲು ಮನೆಗೆ ಅಳವಡಿಸಿದ್ದೇವೆ. ಊರಲ್ಲಿ ಹಬ್ಬವಿರುವ ಕಾರಣಕ್ಕೆ ಪೂಜೆ ಸಲ್ಲಿಸಿದೆವು’ ಎಂದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!