Ad imageAd image

ಸಿದ್ದರಾಮಯ್ಯ ಅವರ 40 ವರ್ಷಗಳ ಶುದ್ಧ ಹಸ್ತದ ಮುಖವಾಡ ಕಳಚಿ ಬಿದ್ದಿದೆ:ಆರ್‌.ಅಶೋಕ್ ವಾಗ್ದಾಳಿ

Bharath Vaibhav
ಸಿದ್ದರಾಮಯ್ಯ ಅವರ 40 ವರ್ಷಗಳ ಶುದ್ಧ ಹಸ್ತದ ಮುಖವಾಡ ಕಳಚಿ ಬಿದ್ದಿದೆ:ಆರ್‌.ಅಶೋಕ್ ವಾಗ್ದಾಳಿ
R ASHOK
WhatsApp Group Join Now
Telegram Group Join Now

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣವನ್ನು ಅಧಿಕಾರಿಗಳ ಮೇಲೆ ಎತ್ತಿ ಹಾಕುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಅವರ 40 ವರ್ಷಗಳ ಶುದ್ಧ ಹಸ್ತದ ಮುಖವಾಡ ಕಳಚಿ ಬಿದ್ದಿದೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್.ಅಶೋಕ್, ವಾಲ್ಮೀಕಿ ನಿಗಮದ ಹಗರಣವನ್ನು ಮುಚ್ಚಿಹಾಕುವ ಯತ್ನ ನಡೆದಿದೆ.

ಅದಕ್ಕೆ ಕ್ಲೀನ್‌ಚಿಟ್‌ ಕೊಟ್ಟುಕೊಂಡ ಸಿಎಂ ಸಿದ್ದರಾಮಯ್ಯ, ಎಲ್ಲ ತಪ್ಪನ್ನು ಅಧಿಕಾರಿಗಳ ಮೇಲೆ ಹಾಕಿದ್ದಾರೆ. ಎಲ್ಲ ಅಧಿಕಾರಿಗಳೇ ಮಾಡಿದ್ದರೆ, ಮುಖ್ಯಮಂತ್ರಿಯೇನು ಕತ್ತೆ ಕಾಯುತ್ತಿದ್ದರೇ? ಆ ಅಧಿಕಾರಿ ತಪ್ಪು ಮಾಡಿದ್ದರೆ ಅದೇ ಹುದ್ದೆಯಲ್ಲಿ ಉಳಿಸಿಕೊಂಡಿದ್ದು ಏಕೆ? ಎಂದು ಪ್ರಶ್ನಿಸಿದರು.

ಸಿಎಂ ಸಿದ್ದರಾಮಯ್ಯ ಮುಖವಾಡ ಕಳಚಿ ಬಿದ್ದಿದೆ. ಅವರೆಷ್ಟು ಶುದ್ಧ ಹಸ್ತರು ಎಂದು ಬಯಲಾಗಿದೆ. ರಾಜ್ಯದ ಜನರ ಹಣವನ್ನು ಕಳ್ಳ ಖಾತೆಯಲ್ಲಿ ಇಟ್ಟಿದ್ದು ರಾಜ್ಯ ಸರ್ಕಾರ. ಬ್ಯಾಂಕ್‌ ಅಧಿಕಾರಿಗಳು ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಿದರು. ಆದರೆ ಸರ್ಕಾರ ವಿಶೇಷ ತನಿಖಾ ದಳಕ್ಕೆ ನೀಡಿ ಮುಚ್ಚಿಹಾಕಿದ್ದಾರೆ ಎಂದರು.

40 ಕ್ಕೂ ಅಧಿಕ ದಾಖಲೆಗಳನ್ನು ನಾನು ಕೊಟ್ಟಿದ್ದೇನೆ. ಈ ಬಗ್ಗೆ ಸಿಎಂ ಸ್ಪಷ್ಟೀಕರಣ ಕೊಡದೆ ಎಲ್ಲಕ್ಕೂ ಪದ್ಮನಾಭ ಕಾರಣ ಎಂದು ಹೇಳಿದ್ದಾರೆ. ಸಚಿವರ ತಪ್ಪಿಲ್ಲ ಎಂದ ಮೇಲೆ ಬಿ.ನಾಗೇಂದ್ರ ರಾಜೀನಾಮೆ ಯಾಕೆ ಕೊಟ್ಟರು? ಹಾಗಾದರೆ ಸಿಎಂ ಅವರನ್ನು ಅರ್ಧ ದಾರಿಯಲ್ಲೇ ಕೈ ಬಿಟ್ಟಿದ್ದಾರೆ ಎಂದರ್ಥ ಎಂದು ವಾಗ್ದಾಳಿ ನಡೆಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!