ದಾಣಗೆರೆ : ಏಪ್ರಿಲ್ 9ರಂದು ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಇಂದು ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ ಶಾಮನೂರು ನಾಮಪತ್ರ ಸಲ್ಲಿಕೆ ಮಾಡಿದರು.
ದಾವಣಗೆರೆ ಮಹಾನಗರ ಪಾಲಿಕೆ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದರು ಈ ವೇಳೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸಾತ್ ನೀಡಿದರು.
ಇನ್ನೂ ತಂದೆ ಮಲ್ಲಿಕಾರ್ಜುನ ಹಾಗೂ ತಾಯಿ ಪ್ರಭಾ ಮಲ್ಲಿಕಾರ್ಜುನ ಕೂಡ ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು. ದಾವಣಗೆರೆ ದಕ್ಷಿಣ ಕ್ಷೇತ್ರ ಅಭ್ಯರ್ಥಿ ಘೋಷಣೆ ಹೈಕಮಾಂಡ್ಗೆ ತಲೆ ನೋವಾಗಿ ಪರಿಣಮಿಸಿತ್ತು.
ನಾವು ಸಮರ್ಥ್ ಅವರನ್ನು ಅಭ್ಯರ್ಥಿಯಾಗಿ ಮಾಡಿದ್ದೇವೆ. ನಾನು ಕೂಡ ಇವತ್ತು ನಾಮಪತ್ರ ಸಲ್ಲಿಸುವಾಗ ಭಾಗಿಯಾಗಿದ್ದೆ. ಬ್ಲಾಕ್ ಕಮಿಟಿ ಅಧ್ಯಕ್ಷ ಅಯುಬ್ ಕೂಡ ಇದ್ದರು.
ನಮ್ಮದು ಎಲ್ಲರನ್ನೂ ಒಳಗೊಂಡಿರುವಂತಹ ಪಕ್ಷ. ಯಾರಾದ್ರೂ ಯಾವ ಶಾಸಕರು ಮೃತರಾಗುತ್ತಾರೋ ಅವರ ಕುಟುಂಬಕ್ಕೆ ಟಿಕೆಟ್ ನೀಡಲಾಗುತ್ತೆ.ಇದು ಕಾಂಗ್ರೆಸ್ ಪಕ್ಷದ ನೀತಿ. ಬಾಗಲಕೋಟೆಯಲ್ಲಿ ಮೇಟಿ ಅವರ ಚಿಕ್ಕ ಮಗನಿಗೆ ಟಿಕೆಟ್ ನೀಡಲಾಗಿದೆ. ದಾವಣಗೆರೆಯಲ್ಲಿ ಸಮರ್ಥ ಅವರಿಗೆ ಟಿಕೆಟ್ ನೀಡಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದರು.




