ಬೆಂಗಳೂರು : ರಾಜ್ಯದಲ್ಲಿ ಭ್ರಷ್ಟಾಚಾರ ಆರೋಪದ ನಡುವೆಯೂ ಸಿಎಂ ಸಿದ್ದರಾಮಯ್ಯ ಇಂದು ರಾತ್ರಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ಮೋದಿ ಜೊತೆ ಮಾತುಕತೆ ನಡೆಸಿದ್ದಾರೆ.
ಇಂದು ಸಂಜೆ ರಾಯಚೂರಿನಿಂದ ನೇರವಾಗಿ ದೆಹಲಿಗೆ ತೆರಳಲಿದ್ದು, ಅಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲಿದ್ದು, ರಾಜ್ಯಪಾಲರು ರವಾನಿಸಿರುವ ಬಿಲ್ ಬಗ್ಗೆ ಚರ್ಚೆ ನಡೆಸಲಿದ್ದಾರೆ.ಅಲ್ಲದೇ ಬಾಕಿ ಉಳಿದ ಬಿಲ್ ಬಗ್ಗೆ ರಾಷ್ಟ್ರಪತಿಯವರಿಗೆ ಮನವರಿಕೆ ಮಾಡಲಿದ್ದಾರೆ.
ಮಕ್ಕಳ ಉಚಿತ ಶಿಕ್ಷಣ ಹಾಗೂ ಕಡ್ಡಾಯ ಶಿಕ್ಷಣದ ಹಕ್ಕು ತಿದ್ದು ಪಡಿ ವಿಧೇಯಕ, ನೋಂದಣಿ ಕರ್ನಾಟಕ ತಿದ್ದುಪಡಿ ವಿಧೇಯಕ, ಕರ್ನಾಟಕ ನೋಟರಿಗಳ ತಿದ್ದು ಪಡಿ ವಿಧೇಯಕ, ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ತಿದ್ದುಪಡಿ ವಿಧೇಯಕ, ಕರ್ನಾಟಕ ದಾರ್ಮಿಕ ಸಂಸ್ಥೆಗಳು ಹಾಗೂ ಧಾರ್ಮಿಕ ದತ್ತಿ ತಿದ್ದುಪಡಿ ವಿಧೇಯಕ 2025ರ ಬಗ್ಗೆ ಸಿಎಂ ಚರ್ಚೆ ನಡೆಸಲಿದ್ದಾರೆ.
ಇನ್ನು ಪ್ರಧಾನಿ ಮೋದಿಯವರ ಭೇಟಿಗೂ ಕೂಡ ಸಿಎಂ ಸಿದ್ದರಾಮಯ್ಯ ಸಮಯ ಕೇಳಿದ್ದು, ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿರೋ ಅನುದಾನದ ಬಗ್ಗೆ ಮೋದಿ ಬಳಿ ಚರ್ಚಿಸಲಿದ್ದಾರೆ.
ಜೊತೆಗೆ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರನ್ನು ಹಾಗೂ ಮತ್ತೋರ್ವ ಕೇಂದ್ರ ಸಚಿವರನ್ನು ಭೇಟಿ ಮಾಡಲು ಅವಕಾಶ ಕೇಳಿದ್ದಾರೆ.
ಇದೆಲ್ಲ ಅದ ಬಳಿಕ ಕಾಂಗ್ರೆಸ್ನ ಹೈಕಮಾಂಡ್ ಭೇಟಿ ಮಾಡಲಿರೋ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರ ಭೇಟಿಗೆ ಸಮಯ ಕೇಳಿದ್ದಾರೆ.




