ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಅಣ್ಣನ ಮಗ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ. ಅತ್ಯಾಚಾರದ ವೀಡಿಯೊ ಹರಿದಾಡಿತು ಎನ್ನುವುದಕ್ಕಿಂತ, ಅತ್ಯಾಚಾರ ಘೋರ ಅಪರಾಧ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅತ್ಯಾಚಾರದ ಸಂಗತಿಯನ್ನು ದುರ್ಬಲಗೊಳಿಸಲು ಡಿ.ಕೆ.ಶಿವಕುಮಾರ್ ಹಾಗೂ ಮತ್ತೊಬ್ಬರ ಮೇಲೆ ಹೇಳುತ್ತಿದ್ದಾರೆ. ಅವರು ಈ ನೆಲದ ಕಾನೂನಿಗೆ ಗೌರವ ಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಅಣ್ಣನ ಮಗ ಅಪರಾಧಿಯಲ್ಲ ಆರೋಪಿ ಅಷ್ಟೇ ಎಂದಿದ್ದಾರೆ, ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಟ್ಟಂತೆ ನಾನೂ ಕೂಡ ಆರೋಪಿ ಎಂದೇ ಹೇಳಿದ್ದೇನೆ.
ಪ್ರಜ್ವಲ್ ರೇವಣ್ಣ ಅವರ ಪಾಸ್ ಪೋರ್ಟ್ ರದ್ದತಿಗೆ ಮೋದಿಯವರಿಗೆ ಪತ್ರ ಬರೆದಿದ್ದು ಈವರೆಗೆ ಅವರಿಂದ ಪ್ರತಿಕ್ರಿಯೆ ಬಂದಿಲ್ಲ. ಎಲ್ಲರಿಗೂ ಪ್ರಧಾನಮಂತ್ರಿಗಳ ಕಚೇರಿಯಿಂದ ಕೂಡಲೇ ಉತ್ತರ ದೊರಕುತ್ತದೆ ಎಂದು ನಂಬಿರುವುದೇ ನಿಮ್ಮ ತಪ್ಪು.
ನಾವು ಬರೆದಿರುವ ಅನೇಕ ಪತ್ರಗಳಿಗೆ ಅವರು ಉತ್ತರ ಕೊಟ್ಟಿಲ್ಲ. ಚುನಾಯಿತ ಸರ್ಕಾರದ ಮುಖ್ಯಮಂತ್ರಿ ಪ್ರಧಾನಿಗಳಿಗೆ ಪತ್ರ ಬರೆದಾಗ ಸ್ವಾಭಾವಿಕವಾಗಿ ಉತ್ತರ ಕೊಡುತ್ತಾರೆ ಎಂಬ ನಂಬಿಕೆ ಇದೆ.
ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡಲು ಬರೆದ ಮೊದಲ ಪತ್ರಕ್ಕೆ ಉತ್ತರ ಕೊಟ್ಟಿಲ್ಲ. ಎರಡನೇ ಪತ್ರಕ್ಕೆ ಉತ್ತರ ಕೊಡುತ್ತಾರೋ ಇಲ್ಲವೋ ಕಾದು ನೋಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ʻʻಸಂಸದ ಪ್ರಜ್ವಲ್ ರೇವಣ್ಣನನ್ನು ವಿದೇಶಕ್ಕೆ ಕಳಿಸಿರುವುದೇ ಅವರ ತಾತ ಎಚ್.ಡಿ.ದೇವೇಗೌಡರು. ವಿದೇಶಕ್ಕೆ ಕಳುಹಿಸಿ ಈಗ ಪತ್ರ ಬರೆದು ಏನು ಮಾಡುತ್ತಾರೆ?” ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು