Ad imageAd image

ಅರಸು ದಾಖಲೆ ಮುರಿದ ಸಿದ್ದರಾಮಯ್ಯ : ದೀರ್ಘ ಕಾಲ ಆಡಳಿತ ನಡೆಸಿದ ಹೆಗ್ಗಳಿಕೆ 

Bharath Vaibhav
ಅರಸು ದಾಖಲೆ ಮುರಿದ ಸಿದ್ದರಾಮಯ್ಯ : ದೀರ್ಘ ಕಾಲ ಆಡಳಿತ ನಡೆಸಿದ ಹೆಗ್ಗಳಿಕೆ 
WhatsApp Group Join Now
Telegram Group Join Now

ಬೆಂಗಳೂರು: ದೇವರಾಜ ಅರಸು ದಾಖಲೆ ಮುರಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅತಿ ಹೆಚ್ಚು ದಿನಗಳ ಕಾಲ ಮುಖ್ಯಮಂತ್ರಿಗಾಗಿ ಕಾರ್ಯನಿರ್ವಹಿಸಿದ್ದಾರೆ.

7 ವರ್ಷ 7 ತಿಂಗಳು 20 ದಿನ ದೇವರಾಜ ಅರಸು ಮುಖ್ಯಮಂತ್ರಿ ಆಗಿದ್ದರು. ಅರಸು ಬಳಿಕ ಪೂರ್ಣಾವಧಿ ಮುಖ್ಯಮಂತ್ರಿ ಆಗಿದ್ದು ಸಿದ್ದರಾಮಯ್ಯ ಅವರು ದೇವರಾಜ ಅರಸು ದಾಖಲೆಯನ್ನು ಮುರಿದಿದ್ದಾರೆ.ಅತಿ ಹೆಚ್ಚು ದಿನಗಳ ಕಾಲ ಮುಖ್ಯಮಂತ್ರಿಗಾಗಿ ಕಾರ್ಯನಿರ್ವಹಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

1972ರ ಮಾರ್ಚ್ 77 ರಿಂದ 27ರ ಡಿಸೆಂಬರ್ 31ರವರೆಗೆ ಮೊದಲ ಅವಧಿಯಲ್ಲಿ ಐದು ವರ್ಷ ಒಂಬತ್ತು ತಿಂಗಳು 11 ದಿನ ಮುಖ್ಯಮಂತ್ರಿ ಆಗಿದ್ದರು. ನಂತರ 59 ದಿನ ಕರ್ನಾಟಕ ರಾಷ್ಟ್ರಪತಿ ಆಳ್ವಿಕೆಯಲ್ಲಿ ಇತ್ತು. ಇದಾದ ನಂತರ 1978ರ ಫೆಬ್ರವರಿ 28ರಿಂದ 1980ರ ಜನವರಿ 7ರವರೆಗೆ ಅರಸು ಮುಖ್ಯಮಂತ್ರಿಯಾಗಿದ್ದರು.

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿ 2013ರ ಮೇ 13 ರಿಂದ 2018 ರ ಮೇ 17ರ ವರೆಗೆ, 2023ರ ಮೇ 20ರಿಂದ ಎರಡನೆಯ ಅವಧಿಗೆ ಮುಖ್ಯಮಂತ್ರಿ ಆಗಿದ್ದಾರೆ. ಎರಡನೆಯ ಅವಧಿಗೆ 963 ದಿನ ಪೂರ್ಣಗೊಳಿಸಿದ್ದಾರೆ.

ಈ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಸಿದ್ಧರಾಮಯ್ಯ, ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ್ ಅರಸು ಅವರು ಸುದೀರ್ಘ ಅವಧಿಗೆ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ದಾಖಲೆ ಸರಿಗಟ್ಟಲು ಜನರ ಆಶೀರ್ವಾದವೇ ಕಾರಣ ಎಂದು ಹೇಳಿದ್ದಾರೆ.

ತಾಲ್ಲೂಕು ಬೋರ್ಡ್ ಸದಸ್ಯನಾದ ನಂತರದ ನನ್ನ ರಾಜಕೀಯ ಜೀವನದಲ್ಲಿ ಸಚಿವನಾಗುವ ಮತ್ತು ಮುಖ್ಯಮಂತ್ರಿಯಾಗುವ ನಿರೀಕ್ಷೆಯಿರಲಿಲ್ಲ. 13 ಚುನಾವಣೆಗಳನ್ನೂ ಎದುರಿಸಿ 9 ಬಾರಿ ಗೆಲುವು ಸಾಧಿಸಿದ್ದೇನೆ. ಕಡಿಮೆ ಜನಸಂಖ್ಯೆಯ ಅರಸು ಸಮುದಾಯದವರಾಗಿದ್ದ ದೇವರಾಜ ಅರಸು ಅವರು ಜನಪ್ರಿಯ ನಾಯಕರಾಗಿದ್ದರು.

ಅಂತಹ ಮಹಾನ್ ನಾಯಕನಿಗೂ ಮತ್ತು ನನಗೂ ಹೋಲಿಕೆ ಸರಿಯಲ್ಲ. ಅರಸು ಅವರ ಅವಧಿಯಲ್ಲಿ ರಾಜ್ಯದ ಪರಿಸ್ಥಿತಿ ವಿಭಿನ್ನವಾಗಿತ್ತು. ಅವರು ಒಂದು ಬಾರಿ ಅವಿರೋಧವಾಗಿಯೂ ಆಯ್ಕೆಯಾಗಿದ್ದರು ಎಂದರು.

ದಾಖಲೆಗಳು ಮುರಿಯಲೆಂದೇ ನಿರ್ಮಾಣವಾಗುತ್ತವೆ. ಪ್ರಸ್ತುತ ನಾನು ಪೂರೈಸಲಿರುವ ಅವಧಿಯನ್ನು ಮೀರಲಿರುವ ಮತ್ತೊಬ್ಬ ನಾಯಕರೂ ಮುಂದೆ ಬರಬಹುದು. ನನಗಿಂತ ಹೆಚ್ಚಿನ ಬಾರಿ ಬಜೆಟ್ ಮಂಡಿಸುವ ನಾಯಕರೂ ಮುಂದೆ ಬರಬಹುದು ಎಂದು ಹೇಳಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!