Join The Telegram | Join The WhatsApp |
ಬೆಂಗಳೂರು : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕುರಿತಾಗಿ ಸಿದ್ದು ನಿಜ ಕನಸುಗಳು ಪುಸ್ತಕ ಇದೀಗ ವಿವಾದಕ್ಕೆ ಕಾರಣವಾಗಿದೆ.
ಬೆಂಗಳೂರಿನ ಟೌನ್ ಹಾಲ್‌ನಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಸಚಿವ ಡಾ. ಅಶ್ವತ್ಥ ನಾರಾಯಣ ಅವರು ಈ ಪುಸ್ತಕ ಬಿಡುಗಡೆ ಮಾಡಲಿದ್ದಾರೆ.
ಸಿದ್ದು ನಿಜ ಕನಸುಗಳು ಪುಸ್ತಕ ಬಿಡಗುಡೆ ವಿರೋಧಿಸಿ ರಾಜ್ಯ ಕುರುಬರ ಸಂಘದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಇಂದು ಮಧ್ಯಾಹ್ನ 2 ಗಂಟೆಗೆ ಕುರುಬರ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಬೆಂಗಳೂರು ಪುರಭವನದ ಮುಂದೆ ಕುರುಬರ ಸಂಘದ ಪದಾಧಿಕಾರಿಗಳು ಪುಸ್ತಕ ಬಿಡುಗಡೆ ಮಾಡಲು ಅವಕಾಶ ಕೊಡದಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಿದ್ದಾರೆ.
Join The Telegram | Join The WhatsApp |