ಧಾರವಾಡ : ಹುಬ್ಬಳ್ಳಿಯ ಗಾಮನಗಟ್ಟಿ ಕೈಗಾರಿಕಾ ಪ್ರದೇಶ ಹಾಗೂ ವಿಮಾನ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿರತೆಯು ಕಾಣಿಸಿಕೊಂಡ ಬಗ್ಗೆ ವರದಿಯಾಗಿದ್ದು, ಡಿಸೆಂಬರ್ 24, 2025 ರಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಸಂತರೆಡ್ಡಿ ಕೆ. ವಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ವಿವೇಕ ಕವರಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪರಿಮಳ ವಿ. ಎಚ್, ವಲಯ ಅರಣ್ಯ ಅಧಿಕಾರಿ, ಆರ್.ಎಸ್. ಉಪ್ಪಾರ, ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕ ರೂಪೇಶ ಕುಮಾರ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ (CISF) ಸಿಬ್ಬಂದಿಗಳು ಮತ್ತು ಅರಣ್ಯ ಇಲಾಖೆಯ ಮುಂಚೂಣಿ ಸಿಬ್ಬಂದಿಗಳು ಹುಬ್ಬಳ್ಳಿಯ ಗಾಮನಗಟ್ಟಿ ಹಾಗೂ ವಿಮಾನ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶದ ಸ್ಥಳ ಪರಿಶೀಲನೆ ಮಾಡಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಚಿರತೆಯನ್ನು ಸೆರೆಹಿಡಿಯಲು ಈಗಾಗಲೇ ಬೋನ್ ಅನ್ನು ಇಡಲು ವ್ಯವಸ್ಥೆ ಮಾಡಲಾಗಿದೆ ಹಾಗೂ ಚಿರತೆಯ ಚಲನವಲನವನ್ನು ಗುರುತಿಸಿ ಸರೆಹಿಡಿಯಲು ಕ್ಯಾಮೆರಾ ಟ್ರಾಪ್ಗಳನ್ನು ಸಹ ಅಳವಡಿಸಲಾಗಿದೆ.




