Join The Telegram | Join The WhatsApp |
ವರದಿ : .ತುಕಾರಾಮ ಪವಾರ
ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟೀಲ್ ಸೋಮಜಾಳ (55) ಶುಕ್ರವಾರ ತಡರಾತ್ರಿ ತೀವ್ರ ಹೃದಯಾಘಾತದಿಂದ ನಿಧನಹೊಂದಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜತೆ ಮಧ್ಯಾಹ್ನ ವಿಜಯಪುರದಲ್ಲಿ ನಡೆದ ಪಂಚರತ್ನ ಯಾತ್ರೆಯಲ್ಲಿ ಪಾಲ್ಗೊಂಡು ಸಿಂದಗಿ ಪಟ್ಟಣಕ್ಕೆ ಮರಳಿದ್ದ ಅವರು, ಪರಿಚಯಸ್ಥರ ಮನೆಯಲ್ಲಿ ಮಾತನಾಡುತ್ತ ಕುಳಿತಿದ್ದಾಗ ಏಕಾಏಕಿ ಕುಸಿದು ಬಿದ್ದರು. ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದರೂ ಅದಾಗಲೇ ಮೃತಪಟ್ಟಿದ್ದಾರೆಂದು ವೈದ್ಯರು ದೃಢಪಡಿಸಿದರು.
ಮೂಲತಃ ಅಲಮೇಲ ತಾಲೂಕು ಸೋಮಜಾಳ ಗ್ರಾಮದವರಾಗಿದ್ದ ಅವರು, ಹದಿ️ನಾರು ವರ್ಷಗಳ ಕಾಲ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಇತ್ತೀಚಿನ ವರ್ಷಗಳಲ್ಲಿ ರಾಜಕೀಯದಲ್ಲಿ ಗುರುತಿಸಿಕೊಂಡಿದ್ದರು. ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.
Join The Telegram | Join The WhatsApp |