ರಾಯಚೂರು: ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ ನಡೆದಿದ್ದು, ಆಸ್ತಿಗಾಗಿ ಹೆತ್ತ ತಾಯಿಯನ್ನೇ ಕೊಲೆಗೈದಿರುವ ಘೋರ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಜಕ್ಕೇರುಮಡು ಗ್ರಾಮದಲ್ಲಿ ಆಸ್ತಿ ವಿಚಾರವಾಗಿ ಮಗ ತನ್ನ ತಾಯಿಯನ್ನೇ ಬರ್ಬರವಾಗಿ ಕೊಲೆಗೈದಿದ್ದಾನೆ.
ಚಂದವ್ವ(55) ಮಗನಿಂದಲೇ ಕೊಲೆಯಾದ ಮಹಿಳೆ. ಕುಮಾರ ತಾಯಿಯನ್ನೇ ಹತ್ಯೆಗೈದ ಮಗ.ಆಸ್ತಿ ವಿಚಾರವಾಗಿ ತಾಯಿ-ಮಗನ ನಡುವೆ ಗಲಾಟೆ ನಡೆದಿದೆ. ಕಂಠಪೂರ್ತಿ ಕುಡಿದು ಬಮ್ದ ಮಗ ಮದ್ಯದ ನಶೆಯಲ್ಲಿ ತಾಯಿ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೈದು ಪರಾರಿಯಾಗಿದ್ದಾನೆ.
ಮಗ ಕುಮಾರ್ ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ. ರಾಯಚೂರಿನ ಸ್ವಗ್ರಾಮಕ್ಕೆ ಬಂದಿದ್ದ. ಈ ವೇಳೆ ಗಲಾಟೆಯಾಗಿದೆ. ಮೂರು ಎಕರೆ ಪಿತ್ರಾರ್ಜಿತ ಆಸ್ತಿಯನ್ನು ಅಣ್ಣ-ತಮ್ಮಂದಿರಿಗೆ ಪಾಲು ಮಾಡುವಂತೆ ಕುಮಾರ್ ತಾಯಿಗೆ ಹೇಳಿದ್ದ. ಆಸ್ತಿ ಪಾಲು ಮಾಡಲು ತಾಯಿ ಒಪ್ಪಿರಲಿಲ್ಲ. ಇದೇ ವಿಚಾರವಾಗಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಗಿದೆ. ಮುದಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕೊಲೆಗೈರು ಪರಾರಿಯಾಗಿರುವ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
.




