ನವದೆಹಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಹಂತ 1 ಗುರುವಾರ ನಡೆಯಲಿದೆ. ತಮಿಳುನಾಡು ವಿಧಾನಸಭೆಗೆ ಏಕ ಹಂತದಲ್ಲಿ ಇಂದು ಚುನಾವಣೆ ನಡೆಯಲಿದೆ.
ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ 234 ಸ್ಥಾನಗಳಿಗೆ 5.73 ಕೋಟಿಗೂ ಹೆಚ್ಚು ಮತದಾರರು 4023 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದಾರೆ.
ಡಿಎಂಕೆ -ಕಾಂಗ್ರೆಸ್ ಮೈತ್ರಿಕೂಟ, ಅಣ್ಣಾ ಡಿಎಂಕೆ- ಬಿಜೆಪಿ ಮೈತ್ರಿಕೂಟ ಮತ್ತು ವಿಜಯ್ ಅವರ ಟಿವಿಕೆ ಮಧ್ಯ ತ್ರಿಕೋನ ಸ್ಪರ್ಧೆ ಇದೆ.
ಪಶ್ಚಿಮ ಬಂಗಾಳದ 294 ಸ್ಥಾನಗಳ ಪೈಕಿ 152 ಸ್ಥಾನಗಳಿಗೆ ಇಂದು ಮತದಾನ ನಡೆಯಲಿದೆ. ಟಿಎಂಸಿ ಮತ್ತು ಬಿಜೆಪಿ ನಡುವೆ ನೇರ ಸ್ಪರ್ಧೆ ಇದೆ. ಕಾಂಗ್ರೆಸ್, ಎಡರಂಗ ಕೂಡ ಪ್ರಬಲ ಪೈಪೋಟಿ ನೀಡಿವೆ. 1.75 ಕೋಟಿ ಮಹಿಳೆಯರು ಸೇರಿದಂತೆ 3.60 ಕೋಟಿ ಹೆಚ್ಚು ಮತದಾರರು ಮತದಾನಕ್ಕೆ ಅರ್ಹರಾಗಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಚುನಾವಣೆ ಏಪ್ರಿಲ್ 29ರಂದು ನಡೆಯಲಿದೆ. ತಮಿಳುನಾಡು ಪಶ್ಚಿಮ ಬಂಗಾಳ ಸೇರಿದಂತೆ ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಮೇ 4 ರಂದು ನಡೆಯಲಿದೆ.




