ಬೆಂಗಳೂರು: ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್‌ಐಟಿ ಅಧಿಕಾರಿಗಳು ಐಜಿಪಿ ಸಂದೀಪ್ ಪಾಟೀಲ್ ಗೆ ನೋಟಿಸ್ ನೀಡಿದ್ದಾರೆ.
ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಸಂದೀಪ್ ಪಾಟೀಲ್ ಗೆ ನೋಟಿಸ್ ನೀಡಿದೆ. ಈ ಹಿಂದೆಯೂ ಎಸ್‌ಐಟಿ ನೋಟಿಸ್ ನೀಡಿತ್ತು.
ಆದರೆ ಸಂದೀಪ್ ಪಾಟೀಲ್ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಹಿಂದೆ ವಿಚಾರಣೆಗೆ ಹಾಜರಾಗದೇ ಇರಲು ಕಾರಣಗಳನ್ನು ತಿಳಿಸುವಂತೆಯೂ ಎಸ್‌ಐಟಿ ಕೇಳಿದೆ.
ಬಿಟ್ ಕಾಯಿನ್ ಹಗರಣ ನಡೆದ ಸಂದರ್ಭದಲ್ಲಿ ಸಂದೀಪ್ ಪಾಟೀಲ್ ಸಿಸಿಬಿ ಮುಖ್ಯಸ್ಥರಾಗಿದ್ದರು. ಈ ನಿಟ್ಟಿನಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಬಿಟ್ ಕಾಯಿನ್ ಹಗರಣ ತನಿಖೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ 2023ರಲ್ಲಿ ತನಿಖೆಗೆ ಎಸ್‌ಐಟಿ ರಚನೆ ಮಾಡಿತ್ತು.