Ad imageAd image

ಸಾಮಾಜಿಕ ಜಾಲತಾಣಗಳಲ್ಲಿ ಪ್ರಜ್ವಲ್ ರೇವಣ್ಣ ವಿಡಿಯೋ ಹಂಚಿದರೇ ಕಠಿಣ ಕ್ರಮ : ಎಸ್ ಐಟಿ ಎಚ್ಚರಿಕೆ

Bharath Vaibhav
SIT
WhatsApp Group Join Now
Telegram Group Join Now

ಬೆಂಗಳೂರು: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್ ಮಾಧ್ಯಮ ಪ್ರಕಟಣೆ ನೀಡಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೋ ಹಂಚುವುದು ಶಿಕ್ಷಾರ್ಹ ಅಪರಾಧವಾಗಿದೆ.

ಸಾಮಾಜಿಕ ಜಾಲತಾಣಗಳಾದ ವಾಟ್ಸಾಪ್, ಮೆಸೆಂಜರ್ ಸೇರಿದಂತೆ ಯಾವುದೇ ಜಾಲತಾಣಗಳಲ್ಲಿ ವಿಡಿಯೋ ಹರಡುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ತಿಳಿಸಿದ್ದಾರೆ.
ಮಾಹಿತಿ ತಂತ್ರಜ್ಞಾನ ಕಾಯ್ದೆ ಕಲಂ 67(ಎ) ಐಟಿ ಕಾಯ್ದೆ ಕಲಂ 228ಎ(1), ಐಪಿಸಿ ಸೆಕ್ಷನ್ 292ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಕರಣದ ಸಂತ್ರಸ್ತರು ಸಹಾಯವಾಣಿ ಸಂಖ್ಯೆಗೆ(63609 38947) ಕರೆ ಮಾಡಿ ಮಾಹಿತಿ ನೀಡಬಹುದು. ಬೆಳಗ್ಗೆ 8ರಿಂದ ರಾತ್ರಿ 8ರತನಕ ಕರೆ ಮಾಡಿ ಸಂಪರ್ಕಿಸಬಹುದು. ಕರೆ ಮಾಡುವ ವ್ಯಕ್ತಿಯ ಗುರುತನ್ನು ಗೌಪ್ಯವಾಗಿ ಇಡಲಾಗುವುದು. ಸಂತ್ರಸ್ತರಿಗೆ ವಿಶೇಷ ತನಿಖಾ ತಂಡ ಅಗತ್ಯ ನೆರವನ್ನು ನೀಡಲಿದೆ ಎಂದು ಪ್ರಕರಣ ಸಂಬಂಧ ಎಸ್‌ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್ ಮಾಧ್ಯಮ ಪ್ರಕಟಣೆ ನೀಡಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!