——————————————-ಬಿಡಿಸಿಸಿ ಬ್ಯಾಂಕ್ ಚುನಾವಣೆ
ಬೆಳಗಾವಿ: ಬೆಳಗಾವಿ ಬಿಡಿಸಿಸಿ ಬ್ಯಾಂಕ್ ಚುನಾವಣೆಗೆ ಸಂಬಂಧಿಸಿದಂತೆ ಸತೀಶ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಪೆನೆಲ್ ನ 6 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪ್ರತಿಷ್ಠಿತ ಬ್ಯಾಂಕಿನ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕಡೆಯ ದಿನವಾದ ಶನಿವಾರ ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ರಾಹುಲ್ ಜಾರಕಿಹೊಳಿ ಅವರು, ಗೋಕಾಕ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಅಮರನಾಥ ಜಾರಕಿಹೊಳಿ, ಯರಗಟ್ಟಿ ಕ್ಷೇತ್ರದಿಂದ ಸವದತ್ತಿ ಶಾಸಕ ವಿಶ್ವಾಸ ವೈದ್ಯ ನಾಮಪತ್ರ ಸಲ್ಲಿಸಿದ್ದರು. ಚಿಕ್ಕೋಡಿ ಕ್ಷೇತ್ರದಿಂದ ಗಣೇಶ ಹುಕ್ಕೇರಿ ನಾಮಪತ್ರ ಸಲ್ಲಿಸಿದ್ದರು. ಮೂಡಲಗಿ ಕ್ಷೇತ್ರದಿಂದ ನಾಮಪತ್ರ ವನ್ನು ನೀಲಕಂಠ ಅವರು ನಾಮಪತ್ರ ಸಲ್ಲಿಸಿದ್ದರು.




