ಮೈಸೂರು : ಪದ್ಮಶ್ರೀ, ಪದ್ಮವಿಭೂಷಣ ಪುರಸ್ಕೃತ ಕನ್ನಡದ ಖ್ಯಾತ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಅವರು, ಇಂದು ಪಂಚಭೂತಗಳಲ್ಲಿ ಲೀನವಾದರು.
ಮೈಸೂರು ಬೆಟ್ಟದ ತಪ್ಪಲಿನಲ್ಲಿರುವ ಚಿರಶಾಂತಿಧಾಮದಲ್ಲಿ ಹೊಯ್ಸಳ ಕರ್ನಾಟಕ ಬ್ರಾಹ್ಮಣ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನೆರವೇರಿತು.ಲಂಡನ್ನಿಂದ ಆಗಮಿಸಿದ್ದ ಅವರ ಪುತ್ರ ರವಿಶಂಕರ್ ತಂದೆಯ ಅಂತ್ಯಕ್ರಿಯೆ ನೆರವೇರಿಸಿದರು.
ಇಂದು ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನ ರುದ್ರ ಭೂಮಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಸಲಾಗಿದೆ.
ಡಾ.ಎಸ್.ಎಲ್. ಭೈರಪ್ಪ ಅವರ ಪಾರ್ಥಿವ ಶರೀರ ಗುರುವಾರ ಮೈಸೂರಿಗೆ ತರಲಾಗಿತ್ತು. ನಗರದ ಕಲಾ ಮಂದಿರ ಬಳಿಯ ಕಿಂದರಿ ಜೋಗಿ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಇಂದುಸಕಲ ಸರ್ಕಾರಿ ಗೌರವಗಳೊಂದಿಗೆ ಕನ್ನಡದ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಅವರ ಅಂತ್ಯಕ್ರಿಯೆಯನ್ನು ನೆರವೇರಿಸಲಾಗಿದೆ.




