Ad imageAd image

ಧಾರವಾಡದ ನೂತನ ಜಿಲ್ಲಾಧಿಕಾರಿಯಾಗಿ ಸ್ನೇಹಲ್ ಆರ್. ಅಧಿಕಾರ ಸ್ವೀಕಾರ 

Bharath Vaibhav
ಧಾರವಾಡದ ನೂತನ ಜಿಲ್ಲಾಧಿಕಾರಿಯಾಗಿ ಸ್ನೇಹಲ್ ಆರ್. ಅಧಿಕಾರ ಸ್ವೀಕಾರ 
WhatsApp Group Join Now
Telegram Group Join Now

ಧಾರವಾಡದ ನೂತನ ಜಿಲ್ಲಾಧಿಕಾರಿಯಾಗಿ ಸ್ನೇಹಲ್ ಆರ್. ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ಮಂಗಳವಾರ ಕರ್ನಾಟಕ ಸರ್ಕಾರ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿತ್ತು. ಧಾರವಾಡ ಡಿಸಿಯಾಗಿದ್ದ ದಿವ್ಯಪ್ರಭು ಅವರನ್ನು ವರ್ಗಾವಣೆಗೊಳಿಸಿ ಆದೇಶಿಸಿತ್ತು.

ಕರ್ನಾಟಕ ಸರ್ಕಾರದ ರಾಷ್ಟ್ರೀಯ ಜೀವನೊಪಾಯ ಅಭಿಯಾನದ ನಿರ್ದೆಶಕಿಯಾಗಿದ್ದ ಮತ್ತು 2017-18ರಲ್ಲಿ ಧಾರವಾಡ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದ ಐಎಎಸ್ ಅಧಿಕಾರಿ ಸ್ನೇಹಲ್.ಆರ್ ಅವರು ಬುಧವಾರ ಧಾರವಾಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡರು

ಜಿಲ್ಲಾಧಿಕಾರಿಯಾಗಿದ್ದ ದಿವ್ಯ ಪ್ರಭು ಜಿ. ಆರ್. ಜೆ. ಅವರನ್ನು ಮಂಗಳವಾರ ರಾಜ್ಯ ಸರ್ಕಾರ ವರ್ಗಾವಣೆ ಮಾಡಿತ್ತು. ಸ್ನೇಹಲ್.ಆರ್. ಅವರನ್ನು ಧಾರವಾಡ ಜಿಲ್ಲಾಧಿಕಾರಿಯಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿತ್ತು.

ನೂತನ ಜಿಲ್ಲಾಧಿಕಾರಿಗಳನ್ನು ಜಿಲ್ಲಾ ಪಂಚಾಯತ್ ಸಿಇಓ ಹಾಗೂ ಪ್ರಭಾರ ಜಿಲ್ಲಾಧಿಕಾರಿಯಾಗಿದ್ದ ಭುವನೇಶ ಪಾಟೀಲ, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಗರೀಮಾ ಪವಾರ, ಐಎಎಸ್ ಪ್ರೊಬೇಷನರಿ ಅಧಿಕಾರಿ ರೀತಿಕಾ ವರ್ಮಾ ಹಾಗೂ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಪುಸ್ತಕ ನೀಡಿ, ಸ್ವಾಗತಿಸಿದರು .ಜಿಲ್ಲಾಧಿಕಾರಿಯಾಗಿದ್ದ ದಿವ್ಯ ಪ್ರಭು ಜಿ. ಆರ್. ಜೆ. ಅವರನ್ನು ಮಂಗಳವಾರ ರಾಜ್ಯ ಸರ್ಕಾರ ವರ್ಗಾವಣೆ ಮಾಡಿತ್ತು. ಸ್ನೇಹಲ್.ಆರ್. ಅವರನ್ನು ಧಾರವಾಡ ಜಿಲ್ಲಾಧಿಕಾರಿಯಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿತ್ತು.

ನೂತನ ಜಿಲ್ಲಾಧಿಕಾರಿಗಳನ್ನು ಜಿಲ್ಲಾ ಪಂಚಾಯತ್ ಸಿಇಓ ಹಾಗೂ ಪ್ರಭಾರ ಜಿಲ್ಲಾಧಿಕಾರಿಯಾಗಿದ್ದ ಭುವನೇಶ ಪಾಟೀಲ, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಗರೀಮಾ ಪವಾರ, ಐಎಎಸ್ ಪ್ರೊಬೇಷನರಿ ಅಧಿಕಾರಿ ರೀತಿಕಾ ವರ್ಮಾ ಹಾಗೂ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಪುಸ್ತಕ ನೀಡಿ, ಸ್ವಾಗತಿಸಿದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!