ಬೆಂಗಳೂರು : ಮೊಬೈಲ್ ಜಾಸ್ತಿ ಬಳಸಬೇಡ, ಓದು ಎಂದು ತಾಯಿ ಬುದ್ದಿ ಮಾತು ಹೇಳಿದ್ದಕ್ಕೆ ಬೇಸರಗೊಂಡ ಮಗ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅರಿಶಿನಕುಂಟೆ ಗ್ರಾಮದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಪುಷ್ಪಾ ಎಂಬುವವರ ಮಗ ಶಶಾಂಕ (19) ಎಂದು ಗುರುತಿಸಲಾಗಿದೆ.ಮನೆಯಲ್ಲಿ ಈತ ಖಾಸಗಿ ಕಾಲೇಜೊಂದರಲ್ಲಿ ದ್ವಿತೀಯ ಬಿಕಾಂ ವ್ಯಾಸಂಗ ಮಾಡುತ್ತಿದ್ದನು.
ಜಾಸ್ತಿ ಮೊಬೈಲ್ ಬಳಸಬೇಡ ಎಂದು ತಾಯಿ ಹೇಳಿದ್ದಕ್ಕೆ ಕೋಪಗೊಂಡ ಶಶಾಂಕ್ ದುಡುಕಿನ ನಿರ್ಧಾರ ಕೈಗೊಂಡಿದ್ದಾನೆ. ರೂಮ್ ಗೆ ಹೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ಮಗ ಇಂತಹ ನಿರ್ಧಾರ ಕೈಗೊಂಡಿರುವುದು ದುರಂತವೇ ಸರಿ.