ನವದೆಹಲಿ: ಲೋಕಸಭೆಯಲ್ಲಿ ಇಂದು ಮಹಿಳಾ ಮೀಸಲಾತಿ ಮಸೂದೆ ಮೇಲಿನ ಚರ್ಚೆ ಪ್ರಾರಂಭವಾಗಿದೆ. ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಪಕ್ಷದ ಪರವಾಗಿ ತಮ್ಮ ಭಾಷಣವನ್ನು ಪ್ರಾರಂಭಿಸಿದ್ಧಾರೆ.
ಸೋನಿಯಾ ಗಾಂಧಿ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯ ಮೇಲಿನ ಚರ್ಚೆಯನ್ನು ಆರಂಭಿಸಿದ್ದು, ಪಕ್ಷವು ಮಸೂದೆಯನ್ನು ಬೆಂಬಲಿಸುತ್ತದೆ ಎಂದು ಹೇಳಿದರು.
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (INC) ಪರವಾಗಿ, ನಾನು ನಾರಿ ಶಕ್ತಿ ವಂದನ್ ಅಧಿನಿಯಮ್ 2023 ರ ಬೆಂಬಲಕ್ಕೆ ನಿಂತಿದ್ದೇನೆ” ಎಂದು ಅವರು ಹೇಳಿದರು.
ಎಸ್ಸಿ, ಎಸ್ಟಿ, ಒಬಿಸಿಗಳಿಗೆ ಉಪ ಕೋಟಾದೊಂದಿಗೆ ಮಹಿಳಾ ಕೋಟಾ ಮಸೂದೆಯನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಸೋನಿಯಾ ಆಗ್ರಹಿಸಿದರು.
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ವ್ಯವಹಾರದ ಪೂರಕ ಪಟ್ಟಿಯಲ್ಲಿ ಮಂಡಿಸಲಾಯಿತು. ಮೀಸಲಾತಿಯು 15 ವರ್ಷಗಳ ಅವಧಿಗೆ ಮುಂದುವರಿಯುತ್ತದೆ ಮತ್ತು ಮಹಿಳೆಯರಿಗೆ ಮೀಸಲಾದ ಸ್ಥಾನಗಳಲ್ಲಿ ಎಸ್ಸಿ ಮತ್ತು ಎಸ್ಟಿಗಳಿಗೆ ಕೋಟಾ ಇರುತ್ತದೆ ಎಂದು ಅದು ಪ್ರಸ್ತಾಪಿಸುತ್ತದೆ.