ರಾಯಚೂರು : ಜಮೀನಿನಲ್ಲಿ ಕೃಷಿ ಚಟುವಟಿಕೆ ಮಾಡುತ್ತಿರುವಾಗಲೇ ಸಿಡಿಲು ಬಡಿದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶಿರವಾರ ತಾಲೂಕಿನ ಕೆ.ಗುಡದಿನ್ನಿ ಗ್ರಾಮದಲ್ಲಿ ಇಂದು ನಡೆದಿದೆ.
ಸಾಯಣ್ಣ (55) ಎಂಬ ರೈತ ಸಿಡಿಲಿನ ಹೊಡೆತಕ್ಕೆ ಸ್ಥಳದಲ್ಲೇ ಮೃತಪಟ್ಟರೆ, ತಾಯಿ ಲಕ್ಷ್ಮಮ್ಮ (70) ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆಯಲ್ಲಿ ಮೃತ ಸಾಯಣ್ಣ ಪತ್ನಿಗೂ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಇನ್ನು ಗಾಯಾಳು ಲಕ್ಷ್ಮಮ್ಮ ಅವರನ್ನು ಕೂಡಲೇ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಶಿರವಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರಂತ ನಡೆದಿದೆ.