ಬೆಂಗಳೂರು : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಉದ್ಯೋಗಾಕಾಂಕ್ಷಿಗಳು ಧಾರವಾಡದಲ್ಲಿ ಪ್ರತಿಭಟನೆ ಮಾಡಿದ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಒಳ ಮೀಸಲಾತಿಯಿಂದ ನೇಮಕಾತಿ ವಿಳಂಬ ಆಗಿದೆ.
ಅದನ್ನು ಸರಿಪಡಿಸುವುದರ ಬಗ್ಗೆ ಚರ್ಚೆ ಮಾಡುತ್ತೇವೆ ಗೃಹ 17000 ಹುದ್ದೆ ಖಾಲಿ ಇದೆ ನೇಮಕಾತಿ ಆದೇಶ ಮಾಡಲು ನಮಗೆ ಅನುಮತಿ ಸಿಕ್ಕಿದೆ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ಹೇಳಿಕೆ ನೀಡಿದರು.
ಇನ್ನು ರಾಜ್ಯ ಸರ್ಕಾರ ಐದು ಪ್ರಮುಖ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಮುಂಬರುವ ಮೇನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ಪೂರ್ಣಗೊಳ್ಳಲಿದೆ. ಆದರೆ ಇದೀಗ ಗೃಹ ಸಚಿವ ಜಿ ಪರಮೇಶ್ವರ್ ಅವರು ಗ್ಯಾರಂಟಿ ಯೋಜನೆ ಜಾರಿ ಮಾಡುವಾಗ ಯಾವುದೇ ನಿಯಮಗಳನ್ನು ಜಾರಿ ಮಾಡಿಲ್ಲ ಎಂದರು.
ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಗ್ಯಾರಂಟಿ ಯೋಜನೆ ಜಾರಿ ಮಾಡುವಾಗ ಯಾವುದೇ ನಿಯಮ ಮಾಡಿರಲಿಲ್ಲ. ಹಣವಂತರು ಯಾರು ತೆಗೆದುಕೊಳ್ಳುತ್ತಾರೆ ಎಂದು ಯೋಚಿಸಿದ್ದೇವು. ಈಗ ಕೆಲವರ ಬಳಿ ಹಣ ಇದ್ದರೂ ಕೂಡ ನಮಗೂ ಕೊಡಿ ಅನ್ನುತ್ತಾರೆ. 100 ಎಕರೆ ಜಮೀನು ಇದರು ಕೂಡ ಎರಡು ಸಾವಿರ ತೆಗೆದುಕೊಳ್ಳುತ್ತಾರೆ ಎಂದರು.




