ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಪೊಲೀಸ್ ಪೇದೆ ನೇಮಕಕ್ಕೆ ಸಿಎಂ ಸಿದ್ದರಾಮಯ್ಯ ಅನುಮತಿ ನೀಡಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದ್ದಾರೆ.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಕಡೆಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಪೊಲೀಸ್ ಸಿಬ್ಬಂದಿಗಳ ಪೀಕ್ ಕ್ಯಾಪ್ ಪರಿಚಯ ಮತ್ತು ವಿತರಣೆ’ ಹಾಗೂ ‘ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ (ANTF) ಉದ್ಘಾಟನೆ’ ಮತ್ತು ‘ಸನ್ಮಿತ್ರ ಬಿಡುಗಡೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದು, ರಾಜ್ಯದಲ್ಲಿ 8,500 ಪೊಲೀಸ್ ಪೇದೆ ನೇಮಕಕ್ಕೆ ಸಿಎಂ ಸಿದ್ದರಾಮಯ್ಯ ಅನುಮತಿ ಕೊಟ್ಟಿದ್ದು, ಬಹಳ ಬೇಗ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಸದ್ಯ ರಾಜ್ಯದಲ್ಲಿ ಪೇದೆ, ಪಿಎಸ್‌ಐ ನೇಮಕಾತಿ ಮಾಡಲು ಮುಖ್ಯಮಂತ್ರಿಗಳು ಅನುಮತಿ ನೀಡಿದ್ದಾರೆ. ನಮ್ಮಲ್ಲಿ ಕೆಎಸ್‌ಆರ್‌ಪಿ, ಸಿಎಆರ್, ಸಿವಿಲ್ ಸೇರಿದಂತೆ ಸುಮಾರು 16 ಸಾವಿರ ಪೊಲೀಸ್ ಪೇದೆ ಹುದ್ದೆಗಳು ಖಾಲಿ ಇವೆ. ಹಾಗಾಗಿ ಈಗ 8500 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.




