ಬೆಂಗಳೂರು : ಇಂದು ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಲವು ವಿಚಾರಗಳ ಕುರಿತು ಚರ್ಚಿಸಿದ್ದಾರೆ.
ಇದೇ ವೇಳೆ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು, ಗ್ಯಾರೆಂಟಿ ಯೋಜನೆಗಳು..ಪ್ರಮುಖವಾಗಿ ಗೃಹಲಕ್ಷ್ಮಿ ಸ್ಕೀಮ್ ವಿಚಾರ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚಿಸಿರುವುದಾಗಿ ಹೇಳಿದ್ದಾರೆ.
ಈ ಸಂದರ್ಭದಲ್ಲಿ ಕಳೆದ ಎರಡು ತಿಂಗಳಿಂದ ಗೃಹ ಲಕ್ಷ್ಮಿ ಯೋಜನೆಯ ಹಣ ಫಲಾನುಭವಿಗಳಿಗೆ ನೀಡಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸದ್ಯದಲ್ಲೇ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ತಲುಪಲಿದೆ ಎಂದು ಹೇಳಿದ್ದಾರೆ.
ಈಗಾಗಲೇ ಜನವರಿ ಮತ್ತು ಫೆಬ್ರವರಿ ತಿಂಗಳ ಹಣ ನೀಡಲಾಗಿದ್ದು, ಮಾರ್ಚ್ ಹಾಗೂ ಏಪ್ರಿಲ್ ತಿಂಗಳ ಹಣವನ್ನು ಕೂಡ ಈಗಾಗಲೇ ಬಿಲ್ ಮಾಡಲಾಗಿದೆ ಎಂದಿದ್ದಾರೆ.
ಇನ್ನು ಮಹಿಳೆಯರಿಗೆ 2000/- ನೀಡುವ ಗೃಹಲಕ್ಷ್ಮಿ ಯೋಜನೆಯ ಹಣ ಎರಡು ತಿಂಗಳಿಂದ ಮಹಿಳೆಯರ ಖಾತೆಗೆ ಜಮೆಯಾಗಿಲ್ಲ ಎಂಬ ಮಾಹಿತಿಯಿದೆ.
ಆದ್ರೆ ಮಾರ್ಚ್ ಆರ್ಥಿಕ ವರ್ಷದ ಕೊನೆಯಾಗಿರುವ ಕಾರಣ ಸ್ವಲ್ಪ ಹೆಚ್ಚು ಕಮ್ಮಿಯಾಗಿದೆ. ಆದ್ರೆ ಕೆಲವೇ ದಿನಗಳಲ್ಲಿ ಎಲ್ಲವೂ ಸರಿಯಾಗಲಿದೆ. ಆದಷ್ಟು ಬೇಗ,ಬಹುತೇಕ ಇನ್ನೊಂದು ವಾರದಲ್ಲಿ ಮಹಿಳೆಯರಿಗೆ ಹಣ ಹಾಕಲಿದ್ದೇವೆ ಎಂದಿದ್ದಾರೆ.




