ಬೆಂಗಳೂರು : ಲೋಕಸಭೆ ಚುನಾವಣೆಯ ಬಳಿಕ ಬಿಜೆಪಿ-ಜೆಡಿಎಸ್ ನ 20ಕ್ಕೂ ಹೆಚ್ಚು ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯ ಬಳಿಕ ಕರ್ನಾಟಕದಲ್ಲಿ ಸರ್ಕಾರ ಉರುಳಲಿದೆ ಎನ್ನುವ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಮೊದಲು ಸಂವಿಧಾನ ಮತ್ತು ಪಕ್ಷಾಂತರ ನಿಷೇಧ ಕಾಯ್ದೆಯನ್ನು ಅರ್ಥಮಾಡಿಕೊಳ್ಳಲಿ ಎಂದರು.
ರಾಜ್ಯದಲ್ಲಿ ನಾವು 136 ಶಾಸಕರಿದ್ದೇವೆ. ಪಕ್ಷಾಂತರ ನಿಷೇಧ ಕಾಯ್ದೆಯಿಂದ ಪಾರಾಗಲು ನಮ್ಮ ೮೯ ಶಾಸಕರು ಬಿಜೆಪಿಗೆ ಹೋಗಬೇಕು. ಈಗ ಬೇರೆ ಪಕ್ಷಕ್ಕೆ ಹೋಗುವ ದಡ್ಡರೂ ಯಾರೂ ಇಲ್ಲ. ಲೋಕಸಭೆ ಚುನಾವಣೆಯ ಬಳಿಕ ಶಿಂಧೆ ಸರ್ಕಾರ ಪತನವಾಗಿ, ಅವರೇ ಮಾಜಿ ಆಗಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.