Ad imageAd image

ಶೀಘ್ರದಲ್ಲೇ ಆರ್‌ಸಿಬಿ ಬ್ರಿಗೇಡ್‌ ಸ್ಥಾಪನೆ : ಕೆ. ಎಸ್ ಈಶ್ವರಪ್ಪ

Bharath Vaibhav
ಶೀಘ್ರದಲ್ಲೇ ಆರ್‌ಸಿಬಿ ಬ್ರಿಗೇಡ್‌ ಸ್ಥಾಪನೆ : ಕೆ. ಎಸ್ ಈಶ್ವರಪ್ಪ
ks eshwarappa
WhatsApp Group Join Now
Telegram Group Join Now

ವಿಜಯಪುರ: ರಾಜ್ಯದಲ್ಲಿ ಹಿಂದುಳಿದವರಿಗೆ, ದಲಿತರಿಗೆ, ಬ್ರಾಹ್ಮಣರಿಗೆ ಮತ್ತು ಲಿಂಗಾಯತರಿಗೆ ಅನ್ಯಾಯವಾಗುವುದನ್ನು ತಡೆಯುವ ನಿಟ್ಟಿನಲ್ಲಿ ಶೀಘ್ರದಲ್ಲೇ ಆರ್‌ಸಿಬಿ (ರಾಯಣ್ಣ,ಚನ್ನಮ್ಮ ಬ್ರಿಗೇಡ್‌) ಅಸ್ಥಿತ್ವಕ್ಕೆ ಬರಲಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಹೇಳಿದರು.

ಹಿಂದುಳಿದವರಿಗೆ ಅನ್ಯಾಯವಾಗುವುದನ್ನು ತಡೆಯಲು ಬ್ರಿಗೇಡ್‌ ಬೇಕು ಎಂದು ಅನೇಕರು ಅಪೇಕ್ಷೆ ವ್ಯಕ್ತಪಡಿಸಿದ್ದಾರೆ. ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ಕೂಡ ಈಶ್ವರಪ್ಪ ಮತ್ತು ಬಸನಗೌಡ ಪಾಟೀಲ ಯತ್ನಾಳ ಸೇರಿ ಆರ್‌ಸಿಬಿ ಸ್ಥಾಪಿಸುವಂತೆ ಸಲಹೆ ನೀಡಿದ್ದಾರೆ.

ಈ ಬಗ್ಗೆ ಬೆಂಬಲಿಗರೊಂದಿಗೆ ಚರ್ಚಿಸಿ, ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ನಗರದಲ್ಲಿ ಭಾನುವಾರ ಸುದ್ದಿಗಾರರಿಗೆ ತಿಳಿಸಿದರು.

ರಾಯಣ್ಣ ಬ್ರಿಗೇಡ್‌ ಚಟುವಟಿಕೆ ನಿಲ್ಲಿಸುವಂತೆ ಈ ಹಿಂದೆ ಬಿ.ಎಸ್‌.ಯಡಿಯೂರಪ್ಪ ದೂರಿನ ಮೇರೆಗೆ ಅಮಿತ್‌ ಶಾ ಅವರು ನನಗೆ ಸೂಚಿಸಿದ್ದ ಕಾರಣಕ್ಕೆ ಕೈಬಿಟ್ಟಿದ್ದೆ. ಅಂದು ರಾಯಣ್ಣ ಬ್ರಿಗೇಡ್‌ ಸಂಘಟನೆ ಕೈಬಿಟ್ಟು ತಪ್ಪು ಮಾಡಿದೆ ಎಂದು ಈಗ ಅನಿಸುತ್ತಿದೆ ಎಂದು ಹೇಳಿದರು.

ಜೀವನದಲ್ಲಿ ಬಿಜೆಪಿ ಬಿಟ್ಟು ಬೇರಾವ ಪಕ್ಷಕ್ಕೂ ಹೋಗುವುದಿಲ್ಲ. ಆದರೆ, ಭ್ರಷ್ಟಾಚಾರಿಗಳಿಂದ, ಅಪ್ಪ-ಮಕ್ಕಳ ಕಪಿಮುಷ್ಠಿಯಿಂದ ಶುದ್ಧೀಕರಣವಾಗದ ಹೊರತು ಬಿಜೆಪಿಗೆ ಸದ್ಯ ಹೋಗಲ್ಲ. ಬಿಜೆಪಿ ನನ್ನ ತಾಯಿ ಇದ್ದಂತೆ.

ಆ ತಾಯಿ ಮೇಲೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸುವುದಕ್ಕಾಗಿ ಧ್ವನಿ ಎತ್ತಿ ಹೊರಬಂದಿದ್ದೇನೆ. ಬಿಜೆಪಿ ಶುದ್ಧೀಕರಣದ ಬಗ್ಗೆ ಪಕ್ಷದ ವರಿಷ್ಠರು ಗಮನ ಹರಿಸುತ್ತಾರೆ ಎಂಬ ನಂಬಿಕೆ ಇದೆ ಎಂದರು.

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!