Ad imageAd image

ಶೀಘ್ರವೇ 1000 ಸಬ್ ಇನ್ಸ್ಪೆಕ್ಟರ್, 8,000 ಕಾನ್ ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ : ಜಿ. ಪರಮೇಶ್ವರ್ 

Bharath Vaibhav
ಶೀಘ್ರವೇ 1000 ಸಬ್ ಇನ್ಸ್ಪೆಕ್ಟರ್, 8,000 ಕಾನ್ ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ : ಜಿ. ಪರಮೇಶ್ವರ್ 
WhatsApp Group Join Now
Telegram Group Join Now

ಬೆಂಗಳೂರು: ರಾಜ್ಯದಲ್ಲಿ 1000 ಸಬ್ ಇನ್ಸ್ಪೆಕ್ಟರ್, 8,000 ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ಶೀಘ್ರವೇ ನಡೆಯಲಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.

ದೇವನಹಳ್ಳಿಯಲ್ಲಿ ಪ್ರೆಸ್ಟೀಜ್ ಗ್ರೂಪ್ ಸಂಸ್ಥೆ ಸಿಎಸ್‌ಆರ್ ನಿಧಿಯಡಿ ನಿರ್ಮಿಸಿದ ಸಹಾಯಕ ಪೊಲೀಸ್ ಆಯುಕ್ತರ ಕಚೇರಿ ಹಾಗೂ ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿ, ಒಂದು ಸಾವಿರ ಸಬ್ ಇನ್ಸ್ಪೆಕ್ಟರ್ ಮತ್ತು 8000 ಕಾನ್ ಸ್ಟೇಬಲ್ ಹುದ್ದೆಗಳಿಗೆ ಶೀಘ್ರವೇ ನೇಮಕಾತಿ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

ಪಿಎಸ್‌ಐ ಹಗರಣ ಬಗೆಹರಿಸಿದ ನಂತರ 545 ಮಂದಿ ತರಬೇತಿ ಪಡೆದು ಸೇವೆಗೆ ಸೇರ್ಪಡೆಯಾಗಿದ್ದಾರೆ. ಮುಖ್ಯಮಂತ್ರಿಯವರು ಸಬ್ ಇನ್ಸ್ಪೆಕ್ಟರ್ ಮತ್ತು ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಗೆ ಅನುಮತಿ ನೀಡಿದ್ದಾರೆ.

ಹಣಕಾಸು ಇಲಾಖೆ ಕೂಡ ಒಪ್ಪಿಗೆ ಸೂಚಿಸಿದ್ದು, ನೇಮಕಾತಿ ಪ್ರಕ್ರಿಯೆ ಮುಂದಿನ ದಿನಗಳಲ್ಲಿ ಆರಂಭವಾಗಲಿದೆ ಎಂದು ಸಚಿವ ಪರಮೇಶ್ವರ್ ಹೇಳಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!