Ad imageAd image

ಕ್ಯಾತಗಾನಕೆರೆ ಚರ್ಚ್ ವಿವಾದ: ಸ್ಥಳಕ್ಕೆ ಎಸ್.ಪಿ ಭೇಟಿ, ಶಾಂತಿ ಸಭೆ ಆಯೋಜನೆ

Bharath Vaibhav
ಕ್ಯಾತಗಾನಕೆರೆ ಚರ್ಚ್ ವಿವಾದ: ಸ್ಥಳಕ್ಕೆ ಎಸ್.ಪಿ ಭೇಟಿ, ಶಾಂತಿ ಸಭೆ ಆಯೋಜನೆ
WhatsApp Group Join Now
Telegram Group Join Now

ಪಾವಗಡ  : ತುಮಕೂರು ಜಿಲ್ಲೆ ಪಾವಗಡ ತಾಲೂಕು ಬಿ ಕೆ ಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕ್ಯಾತಗಾನಕೆರೆ ಗ್ರಾಮದಲ್ಲಿ ನಿರ್ಮಾಣವಾಗಿರುವ ಚರ್ಚ್ ಉದ್ಘಾಟನೆಗೆ ಗ್ರಾಮಸ್ಥರು ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಬುಧವಾರ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್.ಪಿ) ಕೆ.ವಿ. ಅಶೋಕ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಗ್ರಾಮದಲ್ಲಿ ಶಾಂತಿ ಸಭೆ ನಡೆಸಿ, ಸಾರ್ವಜನಿಕರೊಂದಿಗೆ ಚರ್ಚಿಸಿದರು.

ಎಸ್.ಪಿ ಅಶೋಕ್ ಮಾತನಾಡಿ, “ಗ್ರಾಮೀಣ ಭಾಗದ ಜನರು ಕಾನೂನಿನ ಕುರಿತು ಅರಿವಿರಬೇಕು. ಯಾವುದೇ ಸಮಸ್ಯೆ ಎದುರಾದಾಗ 112 ಸಹಾಯವಾಣಿಗೆ ಕರೆ ಮಾಡಿದರೆ, ಪೊಲೀಸರು ತಕ್ಷಣವೇ ಸ್ಥಳಕ್ಕೆ ಬಂದು ಸೂಕ್ತ ಕ್ರಮ ಕೈಗೊಳ್ಳುತ್ತಾರೆ. ಕಾನೂನನ್ನು ಕೈಗೆ ತೆಗೆದುಕೊಳ್ಳದೆ ಶಾಂತಿಯನ್ನು ಕಾಪಾಡಲು ಸಹಕರಿಸಬೇಕು” ಎಂದು ತಿಳಿಸಿದರು. ಅವರು ಗ್ರಾಮಸ್ಥರಿಂದ ಚರ್ಚ್ ಕುರಿತ ಮಾಹಿತಿ ಸಂಗ್ರಹಿಸಿದರು.

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಂದರ್ಭದಲ್ಲಿ, “ಈ ವಿವಾದವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಕೈಗೊಳ್ಳಲಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಜನರಲ್ಲಿ ಕಾನೂನು ಜಾಗೃತಿ ಮೂಡಿಸಲಾಗುವುದು. ಯಾವುದೇ ಸಮಸ್ಯೆಯ ಸಂದರ್ಭದಲ್ಲಿ ಪೊಲೀಸರ ನೆರವು ಪಡೆಯಬೇಕು, ಕಾನೂನು ಕೈಗೆ ತೆಗೆದುಕೊಳ್ಳಬಾರದು” ಎಂದು ಎಸ್.ಪಿ ತಿಳಿಸಿದರು.

ಶಾಂತಿ ಸಭೆಯಲ್ಲಿ ಮಧುಗಿರಿ ಡಿವೈಎಸ್‌ಪಿ ಮಂಜುನಾಥ್, ಪಾವಗಡ ಗ್ರಾಮಾಂತರ ಸಿಪಿಐ ಗಿರೀಶ್, ಪಿಎಸ್ಐ ಲಕ್ಷ್ಮಣ್ ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು.

ವರದಿ : ಶಿವಾನಂದ  ಪಾವಗಡ 

WhatsApp Group Join Now
Telegram Group Join Now
Share This Article
error: Content is protected !!