ಬೆಳಗಾವಿ: ಮೈಸೂರು ಪ್ರವಾದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಉತ್ತರ ಕರ್ನಾಟಕ ಭಾಗದ ಆರಾಧ್ಯ ದೈವ ಸವದತ್ತಿ ಯಲ್ಲಮ್ಮ ದೇವಿಯ ದರ್ಶನವನ್ನು ಪಡೆದಿದ್ದಾರೆ.
ಸವದತ್ತಿ ಯಲ್ಲಮ್ಮ ದೇವಿ ದೇಸ್ಥಾನದ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ಹಿನ್ನೆಲೆಯಲ್ಲಿ ಇಂದು ಸಿಎಂ ಅವರು ಸವದತ್ತಿಗೆ ಆಗಮಿಸಿದ್ದಾರೆ.
ಹುಬ್ಬಳ್ಳಿಯಿಂದ ರಸ್ತೆ ಮಾರ್ಗವಾಗಿ ಸವದತ್ತಿ ಯಲ್ಲಮ್ಮ ದೇವಿ ದೇವಸ್ಥಾನಕ್ಕೆ ಆಗಮಿಸಿದ ಸಿಎಂ ಅವರು ರೇಣುಕಾ ಯಲ್ಲಮ್ಮ ದೇವಿ ದರ್ಶನ ಪಡೆದುಕೊಂಡರು.
ನಂತರ ಇವರ ನೇತೃತ್ವದಲ್ಲಿ ಶ್ರೀ ರೇಣುಕಾ ಯಲ್ಲಮ್ಮ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಹಾಗೂ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆ ನಡೆಯಲಿದೆ. ಈ ಸಂದರ್ಭದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಸಚಿವರು ಉಪಸ್ಥಿತರಿರುವರು.
ಸವದತ್ತಿ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿ ಹಿನ್ನೆಲೆಯಲ್ಲಿ ಕಳೆದ ಬೆಳಗಾವಿ ಚಳಿಗಾಲ ಅಧಿವೇಶನ ಸಂದರ್ಭದಲ್ಲಿ ಸವದತ್ತಿ ಅಭಿವೃದ್ಧಿ ಪ್ರಾಧಿಕಾರ ಜಾರಿಗೆ ತಂದಿದ್ದ ರಾಜ್ಯ ಸರ್ಕಾರ ಈಗ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.




