ಧಾರವಾಡ: ನಗರದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಅಕಾಂಕ್ಷಿಗಳಿಗೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ವತಿಯಿಂದ ವಿಶೇಷ ಕಾರ್ಯಾಗಾರವನ್ನು ಧಾರವಾಡದ ಮಗದುಮ್ಮ ಆನಂದ ಕಲ್ಯಾಣ ಮಂಟಪದಲ್ಲಿ ಅಯೋಜಿಸಲಾಗಿತ್ತು.

ಈ ಕಾರ್ಯಾಗಾರದಲ್ಲಿ ಸರಿ ಸುಮಾರು 5000 ಕ್ಕೂ ಹೆಚ್ಚು ಸ್ಪರ್ಧಾರ್ಥಿಗಳು ಸಂವಾದದಲ್ಲಿ ಪಾಲ್ಗೊಂಡಿದ್ದರು. ವಿಶೇಷವಾಗಿ ಈ ಕಾರ್ಯಗಾರವನ್ನು ಹುಬ್ಬಳ್ಳಿ ಧಾರವಾಡ ನಗರ ದಕ್ಷ ಪೋಲಿನ್ ಕಮಿಷನರೆಟ್ ಅಧಿಕಾರಿಗಳಾದ IPS ಶ್ರೀಯುತ ಏನ್ ಶಶಿಕುಮಾರ ರವರ ನೇತೃತ್ವದಲ್ಲಿ ನಡೆಸಲಾಯಿತು.
ವಿಶೇಷವಾದ ಕಾಳಜಿ ವಹಿಸಿ ಈ ಕಾರ್ಯಗಾರವನ್ನು ನಡೆಸಿದ್ದುವಿದ್ಯಾ ಕಾಶಿ ಧಾರವಾಡ ಜಿಲ್ಲೆಗೆ ಹೆಮ್ಮೆ ತರುವಂತಾಗಿದೆ.
ವರದಿ: ವಿನಾಯಕ ಗುಡ್ಡದಕೇರಿ




