ಬೆಂಗಳೂರು : ಯಲಹಂಕ ಶಾಸಕರಾದ ಎಸ್ .ಆರ್. ವಿಶ್ವನಾಥ್ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆಯನ್ನು ನೆರವೇರಿಸಿದರು.
ಹುಸ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಿಳ್ಳಹಳ್ಳಿ ಯಲ್ಲಿರುವ ಶ್ರೀ ಶಿವಕುಮಾರ ಸ್ವಾಮೀಜಿ ಬಡಾವಣೆಗೆ ಸುಮಾರು ಎರಡುವರೆ ಕೋಟಿ ವೆಚ್ಚದ ರಸ್ತೆ ಮತ್ತು ಚರಂಡಿ ಹಾಗೂ ನೀರಿನ ವ್ಯವಸ್ಥೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು .
ಶಾಸಕರಾದ ಎಸ್.ಆರ್. ವಿಶ್ವನಾಥ್ ಅವರಿಗೆ ಹುಸ್ಕೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ . ಡಾ. ಬಿ. ರಮೇಶ ರವರು ಸಾತ್ ನೀಡಿದರು.
ಇದೇ ಸಂದರ್ಭದಲ್ಲಿ ಯಲಹಂಕ ಕ್ಷೇತ್ರದ ದಾಸನಪುರ ಹೋಬಳಿಯ ವಿವಿಧ ಪಂಚಾಯತಿ ವ್ಯಾಪ್ತಿಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಯಲಹಂಕ ಶಾಸಕರಾದ ಎಸ್.ಆರ್. ವಿಶ್ವನಾಥ್. ಸ್ಕೂಲ್ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಡಾಕ್ಟರ್ ಬಿ. ರಮೇಶ್. ಪಿಲ್ಲಹಳ್ಳಿ ವಾರ್ಡ್ ಸದಸ್ಯರಾದ ಪಿ .ಡಿ .ಲೋಕೇಶ್ ಮತ್ತು ನಾಗರತ್ನಮ್ಮ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ರಾಮ್ ಮೂರ್ತಿ. ರೈತ ಮೋರ್ಚದ ಕಡತನ ಮಲೆ ಸತೀಶ್. ಮಾಜಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಹನುಮಯ್ಯ ಮುಂತಾದ ಮುಖಂಡರುಗಳು ಉಪಸ್ಥಿತರಿದ್ದರು.
ವರದಿ : ಬಾಲಾಜಿ ವಿ




