Ad imageAd image

ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಪೂರ್ವಭಾವಿ ಸಭೆ

Bharath Vaibhav
ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಪೂರ್ವಭಾವಿ ಸಭೆ
WhatsApp Group Join Now
Telegram Group Join Now

ಸಿರುಗುಪ್ಪ: ನಗರದ ಸಿ.ಡಿ.ಪಿ.ಓ ಕಛೇರಿಯ ಸಭಾಂಗಣದಲ್ಲಿ ತಾಲೂಕಾಡಳಿತ, ತಾಲೂಕು ಪಂಚಾಯಿತಿ, ನಗರಸಭೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯ ಪೂರ್ವಭಾವಿ ಸಭೆ ಜರುಗಿತು.

ಸಭೆಯನ್ನುದ್ದೇಶಿಸಿ ಮಾತನಾಡಿದ ತಹಶೀಲ್ದಾರ್ ಗೌಸಿಯಾ ಬೇಗಂ ಅವರು ಮಾತನಾಡಿ ಅಕ್ಟೋಬರ್ 7 ರಂದು ಜರುಗಲಿರುವ ಆದರ್ಶ ವ್ಯಕ್ತಿತ್ವದ ಶ್ರೀ ಮಹರ್ಷಿ ವಾಲ್ಮೀಕಿಯ ಜಯಂತ್ಯೋತ್ಸವವನ್ನು ನಿಮ್ಮೆಲ್ಲರ ಸಹಕಾರದಿಂದ ಗೌರವವಯುತವಾಗಿ ಆಚರಿಸಬೇಕಿದೆ. ಆದ್ದರಿಂದ ಜಯಂತಿ ಆಚರಣೆ ಬಗ್ಗೆ ಸಮಾಜದ ಸಲಹೆ ಸೂಚನೆಗಳನ್ನು ನೀಡುವಂತೆ ಕೋರಿದರು.

ಪೂರ್ವಭಾವಿ ಸಭೆಯಲ್ಲಿ ಹಲವು ಇಲಾಖೆಗಳ ಅಧಿಕಾರಿಗಳು ಗೈರಾಗಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಸಭೆಗೆ ಹಾಜರಾಗದ ಅಧಿಕಾರಿಗಳಿಗೆ ನೋಟೀಸ್ ನೀಡುವಂತೆ ಸಮುದಾಯದ ಮುಖಂಡರು ಒತ್ತಾಯಿಸಿದರು.

ನಗರದಲ್ಲಿರುವ ಶ್ರೀ ಮಹರ್ಷಿ ವಾಲ್ಮೀಕಿ ವೃತ್ತದಲ್ಲಿ ನೂತನ ಭಾವಚಿತ್ರ ಹಾಕುವುದು. ಅಲ್ಲಿ ಬೀಸಾಡುವ ಕಸದ ನಿಯಂತ್ರಿಸುವಂತೆ ನಗರಸಭೆಗೆ ವಿಜಯ್‌ಕುಮಾರ್ ಆಗ್ರಹಿಸಿದರು. ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲೂಕು ಘಟದ ಅಧ್ಯಕ್ಷ ಟಿ.ನರಸಿಂಹ ನಾಯಕ ಅವರು ಮಾತನಾಡಿ ಕಳೆದ ಜಯಂತಿಯಲ್ಲಿ ವಿಶೇಷ ಉಪನ್ಯಾಸಕರಾಗಿ ಬಂದಿದ್ದ ಕರಿಯಪ್ಪ ಮಾಳಿಗಿ ಅವರನ್ನು ಆಹ್ವಾನಿಸಬೇಕು.

ಮಳೆಯಿಂದಾಗಿ ಕಾರ್ಯಕ್ರಮ ಅಸ್ತವ್ಯಸ್ತವಾಗಿತ್ತು. 60 ಸಾವಿರ ಜನಸಂಖ್ಯೆಯುಳ್ಳ ಸಮುದಾಯವಾಗಿದ್ದರಿಂದ ಹೆಚ್ಚಿನ ಜನಸಂಖ್ಯೆ ಸೇರಲಿದ್ದು, ಸೂಕ್ತ ವ್ಯವಸ್ಥೆ ಮಾಡಬೇಕೆಂದರು. ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರಾಘವೇಂದ್ರ ವರ್ಮ ಅವರು ಮಾತನಾಡಿ ಕಾರ್ಯಕ್ರಮದ ಎಲ್ಲಾ ರೂಪುರೇಷೆಗಳ ಬಗ್ಗೆ ಮಾಹಿತಿ ಪಡೆಯಲಾಗಿದೆ.

ಸಂಬಂದಿಸಿದ ನಗರಸಭೆ ಅಧಿಕಾರಿಗಳೊಂದಿಗೆ ಚರ್ಚಿಸಿ ಅಸ್ತವ್ಯಸ್ತವಾಗದಂತೆ ಸೂಕ್ತ ವ್ಯವಸ್ಥೆ ಮಾಡಲಾಗುವುದೆಂದು ತಿಳಿಸಿದರು. ಇದೇ ವೇಳೆ ನಗರಸಭೆ ಅಧ್ಯಕ್ಷೆ ಬಿ.ರೇಣುಕಮ್ಮ, ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಬಸವರಾಜ, ಶಿಶು ಅಭಿವೃದ್ದಿ ಯೋಜನಾಧಿಕಾರಿ ಪ್ರದೀಪ್, ನಿವೃತ್ತ ಪ್ರಾಂಶುಪಾಲರಾದ ಎಮ್.ವೀರೇಶಪ್ಪ, ಬಿ.ಬಸವರಾಜ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಮ್.ವೆಂಕಟೇಶ, ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ತಾಲೂಕು ಗೌರವಾಧ್ಯಕ್ಷ ಸಣ್ಣ ಯಲ್ಲಪ್ಪ, ಉಪಾಧ್ಯಕ್ಷರಾದ ಹೆಚ್.ವಿ.ಈರಣ್ಣ, ಭೀಮಲಿಂಗಪ್ಪ, ರುದ್ರಮುನಿ, ಪ್ರಧಾನ ಕಾರ್ಯದರ್ಶಿ ಎಸ್.ಗಾದಿಲಿಂಗಪ್ಪ, ಮಾಜಿ ಅಧ್ಯಕ್ಷ ಎಮ್.ಹೊನ್ನಪ್ಪ, ವಾಲ್ಮೀಕಿ ವಿದ್ಯಾಭಿವೃದ್ದಿ ಟ್ರಸ್ಟಿನ ಖಜಾಂಚಿ ಎಸ್.ನರೇಂದ್ರಸಿಂಹ ಇನ್ನಿತರ ಪದಾಧಿಕಾರಿಗಳು ಮುಖಂಡರು ಇದ್ದರು.

ವರದಿ: ಶ್ರೀನಿವಾಸ ನಾಯ್ಕ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!