ಪಾವಗಡ : ಪಾವಗಡ ತಾಲೂಕಿನ ಕೆ.ಟಿ.ಹಳ್ಳಿ ಕ್ಲಸ್ಟರ್ ಮಟ್ಟದ ಎಫ್.ಎಲ್.ಎನ್. ಕಲಿಕಾ ಹಬ್ಬ ಕಾರ್ಯಕ್ರಮಕ್ಕೆ ಸಮಾಜ ಸೇವಕ ಹಾಗೂ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಶ್ರೀಯುತ ಲೋಕೇಶ್ ಪಾಳೇಗಾರ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಕರ್ನಾಟಕ ಸರ್ಕಾರದ ಶೈಕ್ಷಣಿಕ ಪ್ರಗತಿಯಲ್ಲಿ ಹಿಂದುಳಿದ ಮಕ್ಕಳಿಗೆ ಎಫ್.ಎಲ್.ಎನ್. ಯೋಜನೆಯ ಕಾರ್ಯಕ್ರಮದ ಮೂಲಕ ಶೈಕ್ಷಣಿಕ ಪ್ರಗತಿಯಲ್ಲಿ ಹಿಂದುಳಿದ ಮಕ್ಕಳಿಗೆ ಶಿಕ್ಷಕರು ವಿಶೇಷ ತರಗತಿಗಳನ್ನು ನಡೆಸಿ ಮಕ್ಕಳ ಪ್ರತಿಭೆಯನ್ನು ಹೆಚ್ಚಿಸುವ ಕಲಿಕಾ ಹಬ್ಬ ಕಾರ್ಯಕ್ರಮ ಇದೊಂದು ವಿನೂತನ ಹಾಗೂ ಉತ್ತಮ ಕಾರ್ಯಕ್ರಮವಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ. ಸಿ.ಅರ್.ಪಿ. ತಿಪ್ಪೇಸ್ವಾಮಿ ರವರು ಮಾತನಾಡಿ ಕೆ.ಟಿ.ಹಳ್ಳಿ ಕ್ಲಸ್ಟರ್ ವ್ಯಾಪ್ತಿಯ ಸುಮಾರು 10 ಸರ್ಕಾರಿ ಶಾಲೆಗಳಲ್ಲಿ ನೂರಕ್ಕೂ ಹೆಚ್ಚು ಮಕ್ಕಳು ಕಲಿಕೆಯಲ್ಲಿ ಹಿಂದೆ ಉಳಿದಿದ್ದು. ಇಂತಹ ಮಕ್ಕಳಿಗೆ ಎಫ್.ಎಲ್.ಎನ್. ಯೋಜನೆಯ ಮುಖಾಂತರ ಕಲಿಕೆಯಲ್ಲಿ ಹಿಂದುಳಿದ ಮಕ್ಕಳು ಶೈಕ್ಷಣಿಕ ಪ್ರಗತಿ ಸಾಧಿಸಿರುವುದರಿಂದ ಈ ಮಕ್ಕಳ ಶೈಕ್ಷಣಿಕ ಪ್ರಗತಿಯ ಪ್ರತಿಭೆಯನ್ನು ಗುರುತಿಸಲು ಕಲಿಕಾ ಹಬ್ಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ಅಧ್ಯಕ್ಷ ರಾಮಚಂದ್ರಪ್ಪ. ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ. ಸುಬ್ಬರಾಯಪ್ಪ. ಮುಖಂಡರಾದ. ಅಶ್ವತಪ್ಪ. ದೇವಲಕೆರೆ ಶಾಲೆಯ ಮುಖ್ಯ ಶಿಕ್ಷಕ ವೀರಭದ್ರ ಸ್ವಾಮಿ. ಹಾಗೂ ಕೆ.ಟಿ.ಹಳ್ಳಿ ಕ್ಲಸ್ಟರ್ ವ್ಯಾಪ್ತಿಯ ಶಾಲೆಗಳ ಮುಖ್ಯ ಶಿಕ್ಷಕರು ಸಹ ಶಿಕ್ಷಕರು ಗ್ರಾಮದ ಮುಖಂಡರು ಹಾಜರಿದ್ದರು.
ವರದಿ: ಶಿವಾನಂದ ಪಾವಗಡ