Ad imageAd image

ಶ್ರೀರಾಮ, ಲಕ್ಷ್ಮಣ ಹಾಗೂ ರಾವಣ ಕ್ರೂರಿಗಳು : ಬಿ. ಟಿ ಲಲಿತಾ ನಾಯಕ್ 

Bharath Vaibhav
ಶ್ರೀರಾಮ, ಲಕ್ಷ್ಮಣ ಹಾಗೂ ರಾವಣ ಕ್ರೂರಿಗಳು : ಬಿ. ಟಿ ಲಲಿತಾ ನಾಯಕ್ 
WhatsApp Group Join Now
Telegram Group Join Now

ದಾವಣಗೆರೆ : ಸಾಹಿತಿ ಬಿಟಿ ಲಲಿತಾ ನಾಯಕ್ ಅವರು ವಿವಾದಾತ್ಮಕ ಹೇಳಿಕೆ ಒಂದನ್ನು ನೀಡಿದ್ದಾರೆ. ರಾಮಾಯಣ ಮಹಾಕಾವ್ಯದಲ್ಲಿರುವ ಶ್ರೀರಾಮ, ಲಕ್ಷ್ಮಣ ಹಾಗೂ ರಾವಣ ಆದರ್ಶ ವ್ಯಕ್ತಿಗಳಲ್ಲ ಕ್ರೂರಿಗಳು ಎಂದು ಬಂಡಾಯ ಸಾಹಿತಿ ಬಿ.ಟಿ ಲಲತಾ ನಾಯಕ್‌ ವಿವಾದಾತ್ಮಕ ಹೇಳಿಕೆ ನೀಡಿದರು.

ದಾವಣಗೆರೆಯ ಎ.ವಿ.ಕೆ ಮಹಿಳಾ ಕಾಲೇಜು ಸಭಾಂಗಣದಲ್ಲಿಂದು ನಡೆದ ವಿಚಾರ ಸಂಕಿರಣದ ಸಮಾರೋಪದಲ್ಲಿ ಅವರು ಮಾತನಾಡಿದರು.

ರಾಮಾಯಣ ಮಹಾಕಾವ್ಯದಲ್ಲಿರುವ ಶ್ರೀರಾಮ, ಲಕ್ಷ್ಮಣ ಹಾಗೂ ರಾವಣ ಕ್ರೂರಿಗಳು. ಶೂರ್ಪನಖಿಯ ಮೂಗು ಕತ್ತರಿಸಿದ ಲಕ್ಷ್ಮಣ, ಸೀತೆಯ ಮೇಲೆ ಸಂಶಯ ವ್ಯಕ್ತಪಡಿಸಿ ನಿರ್ಜನ ಕಾಡಿಗಟ್ಟಿದ ಶ್ರೀರಾಮ ಆದರ್ಶರಾಗಲು ಸಾಧ್ಯವಿಲ್ಲ. ಸೀತೆಯನ್ನ ಅಪಹರಿಸಿ ಜೀವನ ಹಾಳು ಮಾಡಿದ ರಾವಣ ಕೂಡ ಕ್ರೂರಿಯೇ ಭಕ್ತಿಯ ಹೆಸರಿನಲ್ಲಿ ಆದರ್ಶರಂತೆ ಬಿಂಬಿಸಲಾಗಿದೆ ಎಂದು ಆಕ್ಷೇಪಿಸಿದರು.ಜನರನ್ನ ಮೌಢ್ಯತೆಗೆ ತಳ್ಳುತ್ತಿವೆ. ಗ್ರಂಥಾಲಯಗಳು ಜ್ಞಾನಾರ್ಜನೆಯತ್ತ ಕರೆದೊಯ್ಯುತ್ತವೆ.

ಮೌಢ್ಯಗಳಿಂದ ಹೊರಬರಲು ಶಿಕ್ಷಣವೇ ಪರಿಹಾರ. ಶಾಂತಿಯ ಪ್ರತೀಕವಾಗಿರುವ ಬುದ್ಧನ ಕೈಯಲ್ಲಿ ಕತ್ತಿ, ಗುರಾಣಿ, ಖಡ್ಗ ಏನೂ ಇಲ್ಲ. ಮಹಾತ್ಮ ಗಾಂಧೀಜಿ ಕೈಯಲ್ಲಿ ಚರಕ ಮಾತ್ರ ಇದೆ. ಇತ್ತೀಚೆಗೆ ಶ್ರೀರಾಮನ ಕೈಗೆ ಬಿಲ್ಲು, ಬಾಣ ನೀಡಲಾಗಿದೆ ಎಂದು ಲಲಿತಾ ನಾಯಕ್ ಬೇಸರ ವ್ಯಕ್ತಪಡಿಸಿದ್ದಾರೆ.

ಭಕ್ತಿಯ ಜೊತೆಗೆ ಬೆರೆತ ಮೌಢ್ಯಗಳು ಜನರ ವಿಚಾರಶಕ್ತಿಯನ್ನ ಹಾಳುಮಾಡಿವೆ. ದೇಗುಲಗಳು ಜನರನ್ನ ಮೌಢ್ಯತೆಗೆ ತಳ್ಳುತ್ತಿವೆ. ಗ್ರಂಥಾಲಯಗಳು ಜ್ಞಾನಾರ್ಜನೆಯತ್ತ ಕರೆದೊಯ್ಯುತ್ತವೆ.

ಮೌಢ್ಯಗಳಿಂದ ಹೊರಬರಲು ಶಿಕ್ಷಣವೇ ಪರಿಹಾರ. ಮನುಷ್ಯನ ತಪ್ಪುಗಳೇ ಸಾಹಿತ್ಯ, ಮಹಾಕಾವ್ಯಗಳಾಗಿ ರೂಪಿತಗೊಂಡಿವೆ.

ರಾಮಾಯಣ ಮತ್ತು ಮಹಾಭಾರತ ಕೂಡ ಇಂತಹದ್ದೇ ಸಾಹಿತ್ಯ. ಶಾಂತಿಯ ಪ್ರತೀಕವಾಗಿರುವ ಬುದ್ಧನ ಕೈಯಲ್ಲಿ ಕತ್ತಿ, ಗುರಾಣಿ, ಖಡ್ಗ ಏನೂ ಇಲ್ಲ. ಮಹಾತ್ಮ ಗಾಂಧೀಜಿ ಕೈಯಲ್ಲಿ ಚರಕ ಮಾತ್ರ ಇದೆ. ಇತ್ತೀಚೆಗೆ ಶ್ರೀರಾಮನ ಕೈಗೆ ಬಿಲ್ಲು, ಬಾಣ ನೀಡಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!