Ad imageAd image

ಎಂಬಿಬಿಎಸ್ ಪದವಿ ಪಡೆದ ನಟಿ ಶ್ರೀಲೀಲಾ

Bharath Vaibhav
ಎಂಬಿಬಿಎಸ್ ಪದವಿ ಪಡೆದ ನಟಿ ಶ್ರೀಲೀಲಾ
WhatsApp Group Join Now
Telegram Group Join Now

ದಕ್ಷಿಣ ಭಾರತದ ಖ್ಯಾತ ನಟಿ ಮತ್ತು ಕನ್ನಡತಿ ಶ್ರೀಲೀಲಾ ನಟನೆಯ ಜೊತೆಗೇ ತಮ್ಮ ವಿದ್ಯಾಭ್ಯಾಸ ಪೂರ್ಣಗೊಳಿಸಿ ಎಂಬಿಬಿಎಸ್ ಪದವಿ ಪಡೆದು ವೈದ್ಯೆಯಾಗಿದ್ದಾರೆ.

ಶ್ರೀಲೀಲಾ ನಿನ್ನೆಯಷ್ಟೆ ತಮ್ಮ ವೈದ್ಯ ಪದವಿಯನ್ನು ಗಳಿಸಿಕೊಂಡಿದ್ದು, ಮುಂಬೈನ ಡಿವೈ ವೈದ್ಯಕೀಯ ವಿವಿಯಲ್ಲಿ ಆಯೋಜಿಸಲಾಗಿದ್ದ ಪದವಿ ವಿತರಣಾ ಘಟಿಕೋತ್ಸವ ಸಮಾರಂಭದಲ್ಲಿ ಹಲವಾರು ವಿದ್ಯಾರ್ಥಿಗಳ ಜೊತೆಗೆ ಶ್ರೀಲೀಲಾ ಸಹ ತಮ್ಮ ವೈದ್ಯ ಪದವಿಯನ್ನು ಸ್ವೀಕಾರ ಮಾಡಿದ್ದಾರೆ.

ಶ್ರೀಲೀಲಾ ವೈದ್ಯಕೀಯ ಪದವಿ ಸ್ವೀಕಾರ ಮಾಡುತ್ತಿರುವ ಹಲವು ಚಿತ್ರಗಳು, ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ವ್ಯಾಪಕ ವೈರಲ್ ಆಗುತ್ತಿದೆ.

ವಿಡಿಯೋನಲ್ಲಿ ಪ್ರತಿಜ್ಞೆ ಬೋಧಿಸಿದ ಬಳಿಕ ‘ನೀವುಗಳು ಇದೀಗ ಅಧಿಕೃತವಾಗಿ ವೈದ್ಯರು’ ಎಂಬ ಘೋಷಣೆ ಬಂದ ಕೂಡಲೇ ಖುಷಿಯಾಗಿ ನಗುತ್ತಿರುವ ಶ್ರೀಲೀಲಾ ಅವರ ವಿಡಿಯೋ ಇದೀಗ ವೈರಲ್ ಆಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!