Ad imageAd image

ಹೃದಯಾಘಾತದಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ ಸಾವು 

Bharath Vaibhav
ಹೃದಯಾಘಾತದಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ ಸಾವು 
WhatsApp Group Join Now
Telegram Group Join Now

ಬೆಂಗಳೂರು : ಇತ್ತೀಚಿಗೆ ಮಕ್ಕಳಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಮೈಸೂರಿನಲ್ಲಿ ಹೃದಯಾಘಾತದಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ನಡೆದಿದೆ.

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ.ನಾಗರಾಜ್ , ವಸಂತ ದಂಪತಿ ಪುತ್ರಿ ದೀಪಿಕಾ (15) ಮೃತಪಟ್ಟಿದ್ದು, ಇದ್ದಕ್ಕಿದ್ದಂತೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ದೀಪಿಕಾಳನ್ನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಆದರೆ ಮಾರ್ಗ ಮಧ್ಯೆ ಬಾಲಕಿ ಮೃತಪಟ್ಟಿದ್ದಾಳೆ . ಬಾಲಕಿ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ವೈದ್ಯರು ಧೃಡಪಡಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ಹೃದಯಾಘಾತ ಹೆಚ್ಚುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಅದರಲ್ಲೂ ವಿದ್ಯಾರ್ಥಿಗಳು ಕುಸಿದು ಬಿದ್ದು ಹೃದಯಾಘಾತಕ್ಕೆ ಬಲಿಯಾಗುತ್ತಿರುವುದು ಪೋಷಕರ ಆತಂಕಕ್ಕೆ ಕಾರಣವಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!