ಹುಬ್ಬಳ್ಳಿ ;- ಧಾರವಾಡ ಮಹಾನಗರ ಪಾಲಿಕೆಯ ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶ್ರೀ ನಿತಿನ್ ಇಂಡಿ ರವರು ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಘನತಾಜ್ಯ ವಿಲೇವಾರಿ ಘಟಕಕ್ಕೆಭೇಟಿ ನೀಡಿ ಸಂಸ್ಕರಣ ಘಟಕದಲ್ಲಿ ಮೀಥೇನ್ ಗ್ಯಾಸ್ ಉತ್ಪತ್ತಿಯಾಗುವುದರಿಂದ ಆಕಸ್ಮಿಕವಾಗಿ ಬೆಂಕಿ ತಗಳದೆ ಇರಲು ಮುಂಜಾಗ್ರತ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡುವ ಮೂಲಕ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು.
ಮತ್ತು ಲೆಗಸಿ ವೇಸ್ಟ್ ಟೆಂಡರ್ ಪ್ರಕ್ರಿಯೆ ಬಗ್ಗೆ ಅಧಿಕಾರಿಗಳೊಂದಿಗೆ ಸಂವಾದ ಮಾಡಿ ಟೆಂಡರ್ ಪ್ರಕ್ರಿಯೆಯನ್ನು ತುರ್ತಾಗಿ ಮುಗಿಸಿಕೊಡಲು ಅಧಿಕಾರಿಗಳಿಗೆ ಸೂಚಿಸಲಾಯಿತು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಆರೋಗ್ಯ ಸ್ಥಾಯಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು ಹಾಗೂ ಕಾರ್ಯನಿರ್ವಾಹಕ ಅಭಿಯಂತರರು ರವರು ಉಪಸ್ಥಿತರಿದ್ದರು.
ವರದಿ: ವಿನಾಯಕ ಗುಡ್ಡದಕೇರಿ