ಬೆಂಗಳೂರು : ರಾಜ್ಯ ಬಜೆಟ್ ಮಂಡನೆಗೆ ಸಂಬಂಧಿಸಿ ತಮ್ಮ ಮಂಡಿನೋವಿನ ನಡುವೆಯೇ ನಿರಂತರವಾಗಿ ಪೂರ್ವಭಾವಿ ಸಭೆ ನಡೆಸಿರುವ ಸಿಎಂ ಸಿದ್ದರಾಮಯ್ಯ ಅವರು ಮಾ.7ರಂದು ಬಜೆಟ್ ಮಂಡಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿ, ಮಾ.3ರಿಂದ ವಿಧಾನ ಮಂಡಲದ ಬಜೆಟ್ ಅಧಿವೇಶನ ಆರಂಭವಾಗಲಿದೆ.
ಅಂದು ರಾಜ್ಯಪಾಲರು ಬಜೆಟ್ ಮೇಲಿನ ಭಾಷಣ ಮಾಡಲಿದ್ದು, ರಾಜ್ಯಪಾಲರ ಭಾಷಣದ ಮೇಲೆ ಮೂರು ದಿನಗಳ ಕಾಲ ಚರ್ಚೆ ನಡೆಯಲಿದೆ. ನಂತರ ನಿಗದಿಯಂತೆ ಮಾ.7ರಂದು ರಾಜ್ಯ ಬಜೆಟ್ ಮಂಡಿಸುವುದಾಗಿ ಹೇಳಿದರು.
ಇನ್ನು ಮಾರ್ಚ್ ಅಂತ್ಯಕ್ಕೆ ಬಜೆಟ್ ಮೇಲಿನ ಪ್ರಶ್ನೆಗಳಿಗೆ ಉತ್ತರಿಸಲಾಗುವುದು ಎಂದು ವಿವರಿಸಿದರು. ಕಳೆದ 3 ತಿಂಗಳಿನಿಂದ ಗೃಹಲಕ್ಷ್ಮಿ, ಅನ್ನಭಾಗ್ಯ ಯೋಜನೆಯ ಹಣ ಬಿಡುಗಡೆಯಾಗದ ಬಗ್ಗೆ ಮಾಹಿತಿಯಿಲ್ಲ. ಶೀಘ್ರವೇ ಈ ಬಗ್ಗೆ ಸೂಚಿಸುವೆ ಎಂದರು.