ಬೆಂಗಳೂರು : ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಅಬಕಾರಿ ಇಲಾಖೆಯಲ್ಲಿ 1207 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.
ಅಬಕಾರಿ ಇಲಾಖೆ ಶೀಘ್ರದಲ್ಲೇ ಈ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಿದೆ.ಅಬಕಾರಿ ಇಲಾಖೆಯಲ್ಲಿ ಗ್ರೂಪ್ ಎ, ಗ್ರೂಪ್ ಬಿ, ಗ್ರೂಪ್ ಸಿ ಎಂದು ವಿವಿಧ ವೃಂದದ ಹುದ್ದೆಗಳು ಬರಲಿದೆ.
ಅಬಕಾರಿ ಉಪ ನಿರೀಕ್ಷಕರು-265 ಹುದ್ದೆಗಳು
ಅಬಕಾರಿ ಪೇದೆಗಳು-942 ಹುದ್ದೆಗಳು
ಒಟ್ಟು 1207
*ವೇತನ
ರಾಜ್ಯ ಸರ್ಕಾರದ 7ನೇ ವೇತನ ಆಯೋಗದ ನಿಯಮಾವಳಿಗಳ ಅನ್ವಯ ವೇತನ ನಿಗದಿಯಾಗಲಿದೆ.
*ವಯೋಮಿತಿ:ಅಭ್ಯರ್ಥಿಗಳು ಕನಿಷ್ಟ 18 ವರ್ಷ ತುಂಬಿರಬೇಕು ಮತ್ತು ಗರಿಷ್ಟ ಅಂದರೇ 27 ವರ್ಷದವರೆಗೆ ಅರ್ಜಿ ಸಲ್ಲಿಸಬಹುದು.
*ಆಯ್ಕೆವಿಧಾನ ಹೇಗೆ..?
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸ್ಪರ್ಧಾತ್ಮಕ ಪರೀಕ್ಷೆ, ದೈಹಿಕ ಪರೀಕ್ಷೆ & ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಗುತ್ತದೆ.
*ಅರ್ಜಿ ಸಲ್ಲಿಸುವ ದಿನಾಂಕಗಳು:
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ: ಶೀಘ್ರವೇ ಅಧಿಸೂಚನೆ ಪ್ರಕಟ