ಬೆಂಗಳೂರು: ರಾಜ್ಯದ ಕೆಲವು ರೈತರು ಮತ್ತು ಇತರೆ ಆಸ್ತಿಗಳನ್ನು ವಕ್ಪ್ ಹೆಸರಿಗೆ ಖಾತೆ ಮಾಡಿಸುವ ಸಂಬಂಧ ನೀಡಿರುವ ಎಲ್ಲಾ ನೋಟಿಸ್ ಗಳನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಸೂಚಿಸಿ ಕಂದಾಯ ಇಲಾಖೆಯು ಎಲ್ಲಾ ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಗೆ ಆದೇಶ ಹೊರಡಿಸಿದೆ.
ವಕ್ಪ್ ಹೆಸರಿಗೆ ಖಾತೆ ಬದಲಾವಣೆ ಕುರಿತಾದ ಯಾವುದೇ ಕಚೇರಿ ಅಥವಾ ಪ್ರಾಧಿಕಾರದಿಂದ ನೀಡಲಾದ ನಿರ್ದೇಶನಗಳನ್ನು ತಕ್ಷಣವೇ ಹಿಂಪಡೆದುಕೊಳ್ಳಬೇಕು.
ವಕ್ಪ್ ಆಸ್ತಿ ಕುರಿತ ಮ್ಯುಟೇಷನ್ ಪ್ರಕ್ರಿಯೆಯನ್ನು ಕೂಡಲೇ ಸ್ಥಗಿತಗೊಳಿಸಬೇಕು. ಈ ವಿಚಾರದಲ್ಲಿ ಮುಖ್ಯಮಂತ್ರಿಗಳು ನೀಡಿರುವ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.
ಸದರಿ ಜಮೀನುಗಳಲ್ಲಿ ಕೃಷಿ ಮಾಡುತ್ತಿರುವ ರೈತರ ವಿರುದ್ಧ ಯಾವುದೇ ಕ್ರಮ ಜರುಗಿಸಬಾರದು ಎಂದು ಕಂದಾಯ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಡಾ. ಬಿ. ಉದಯ ಕುಮಾರ್ ಶೆಟ್ಟಿ ಆದೇಶದಲ್ಲಿ ತಿಳಿಸಿದ್ದಾರೆ.