Ad imageAd image

ರಾಜ್ಯದ ಎಲ್ ಕೆಜಿ ಮಕ್ಕಳಿಗೂ ಬಾಳೆಹಣ್ಣು, ಮೊಟ್ಟೆ ವಿತರಣೆ : ರಾಜ್ಯ ಸರ್ಕಾರ ಆದೇಶ 

Bharath Vaibhav
ರಾಜ್ಯದ ಎಲ್ ಕೆಜಿ ಮಕ್ಕಳಿಗೂ ಬಾಳೆಹಣ್ಣು, ಮೊಟ್ಟೆ ವಿತರಣೆ : ರಾಜ್ಯ ಸರ್ಕಾರ ಆದೇಶ 
vidhan soudha
WhatsApp Group Join Now
Telegram Group Join Now

ಬೆಂಗಳೂರು : 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿನ ಕಂಡಿಕೆ-106ರ ಘೋಷಣೆಯಂತೆ ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿ ಪ್ರಸ್ತುತ 53 ಲಕ್ಷ ಮಕ್ಕಳಿಗೆ ವಾರದಲ್ಲಿ ಎರಡು ದಿನ ವಿತರಿಸಲಾಗುತ್ತಿರುವ ಮೊಟ್ಟೆ/ಬಾಳೆಹಣ್ಣನ್ನು ಅಜೀಮ್ ಪ್ರೇಮ್‌ಜಿ ಫೌಂಡೇಶನ್ ಸಹಯೋಗದೊಂದಿಗೆ 1,500 ಕೋಟಿ ರೂ.ವೆಚ್ಚದಲ್ಲಿ ವಾರದಲ್ಲಿ ಆರು ದಿನಕ್ಕೆ ವಿಸ್ತರಿಸಲಾಗಿದ್ದು ಈ ಯೋಜನೆಯನ್ನು 2025-26ನೇ ಸಾಲಿನಲ್ಲಿ ಮುಂದುವರೆಸುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ.

2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿನ ಕಂಡಿಕೆ-106ರಲ್ಲಿ ಕೆಳಕಂಡಂತೆ ಘೋಷಿಸಲಾಗಿದೆ. *ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿ ಪ್ರಸ್ತುತ 53 ಲಕ್ಷ ಮಕ್ಕಳಿಗೆ ವಾರದಲ್ಲಿ ಎರಡು ದಿನ ವಿತರಿಸಲಾಗುತ್ತಿರುವ ಮೊಟ್ಟೆ/ಬಾಳೆಹಣ್ಣನ್ನು ಅಜೀಮ್ ಪ್ರೇಮ್‌ಜಿ ಫೌಂಡೇಶನ್ ಸಹಯೋಗದೊಂದಿಗೆ 1,500 ಕೋಟಿ ರೂ. ವೆಚ್ಚದಲ್ಲಿ ವಾರದಲ್ಲಿ ಆರು ದಿನಕ್ಕೆ ವಿಸ್ತರಿಸಲಾಗಿದೆ.”

ಮೇಲೆ ಓದಲಾದ ಕ್ರಮಾಂಕ (2)ರ ಸರ್ಕಾರದ ಆದೇಶದಲ್ಲಿ 2021-22ನೇ ಸಾಲಿನ ಮಧ್ಯಾಹ್ನ ಉಪಹಾರ ಯೋಜನೆಗೆ ಸಂಬಂಧಿಸಿದ ವಾರ್ಷಿಕ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾದ ಕೇಂದ್ರ ಸರ್ಕಾರದ ಪಿ.ಎ.ಬಿ ಸಭಾ ನಡವಳಿಯಲ್ಲಿ Flexibility for New Intervention ಚಟುವಟಿಕೆಗಳಡಿ ಬೀದರ್, ಬಳ್ಳಾರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ 1 ರಿಂದ 08ನೇ ತರಗತಿಗಳ ವರೆಗೆ ವ್ಯಾಸಂಗ ಮಾಡುತ್ತಿರುವ ಫಲಾನುಭವಿ ವಿದ್ಯಾರ್ಥಿಗಳಿಗೆ 46 ದಿನಗಳಿಗೆ ಪೂರಕ ಪೌಷ್ಠಿಕಾಂಶದ ರೂಪದಲ್ಲಿ (Supplementary Nutrition) ಮೊಟ್ಟೆ ಅಥವಾ ಇತರೆ ಪೌಷ್ಠಿಕ ಆಹಾರ ಪದಾರ್ಥವನ್ನು ವಿತರಿಸಲು ಆದೇಶಿಸಲಾಗಿದೆ.

ಓದಲಾದ ಕ್ರಮಾಂಕ (3)ರ ಸರ್ಕಾರದ ಆದೇಶದಲ್ಲಿ 2022-23ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆ (ಮಧ್ಯಾಹ್ನ ಉಪಹಾರ ಯೋಜನೆ) ರಡಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 1 ರಿಂದ 8ನೇ ತರಗತಿಗಳವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 46 ದಿನಗಳಿಗೆ ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮೊಟ್ಟೆ ಅಥವಾ ಬಾಳೆಹಣ್ಣು/ಚಿಕ್ಕಿಯನ್ನು ವಿತರಿಸಲು ಆದೇಶಿಸಲಾಗಿರುತ್ತದೆ.

ಮೇಲೆ ಓದಲಾದ ಕ್ರಮಾಂಕ (4)ರ ಸರ್ಕಾರದ ಆದೇಶದಲ್ಲಿ 2023-24ನೇ ಸಾಲಿನ ಜುಲೈ ಆಯವ್ಯಯ ಭಾಷಣದ ಕಂಡಿಕೆ-91ರಲ್ಲಿನ ಘೋಷಣೆಯಂತೆ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1 ರಿಂದ 10ನೇ ತರಗತಿಗಳವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ, (ಪ್ರತಿ ವಿದ್ಯಾರ್ಥಿಯ ಒಂದು ದಿನದ ಘಟಕ ವೆಚ್ಚ ರೂ 6/- ರಂತೆ) 80 ದಿನಗಳಿಗೆ ಪೂರಕ ಪೌಷ್ಠಿಕಾಂಶದ ರೂಪದಲ್ಲಿ (Supplementary Nutrition) ಮೊಟ್ಟೆ /ಶೇಂಗಾ ಚಿಕ್ಕಿ/ಬಾಳೆಹಣ್ಣನ್ನು ವಿತರಿಸಲು ಆದೇಶಿಸಲಾಗಿರುತ್ತದೆ.

ಮೇಲೆ ಓದಲಾದ ಕ್ರಮಾಂಕ (5)ರ ಸರ್ಕಾರದ ಆದೇಶದಲ್ಲಿ ಅಜೀಂ ಪ್ರೇಮ್‌ಜಿ ಫೌಂಡೇಶನ್ ಬೆಂಗಳೂರು ಇವರ ಸಹಭಾಗಿತ್ವದಲ್ಲಿ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ (ಈಗಾಗಲೇ ವಾರದಲ್ಲಿ ಎರಡು ದಿನ ನೀಡಲಾಗುತ್ತಿರುವ ಪೂರಕ ಪೌಷ್ಠಿಕ ಆಹಾರದ ಕೊರತಾಗಿ) ವಾರದಲ್ಲಿ ನಾಲ್ಕು ದಿನ ಪೂರಾ ಪೌಷ್ಠಿಕ ಆಹಾರವನ್ನು ಉಚಿತವಾಗಿ ವಿತರಿಸುವ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲು ಬ್ಯಾಂಕ್ ಖಾತೆಗಳನ್ನು ತೆರೆಯಲು ಆದೇಶಿಸಲಾಗಿರುತ್ತದೆ.

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!